ಇಂಟೆಲ್ ಕಂಪನಿ
ವಾಷಿಂಗ್ಟನ್: ಅಮೆರಿಕದ ಎಲೆಕ್ಟ್ರಾನಿಕ್ ಚಿಪ್ ತಯಾರಿಕಾ ಕಂಪನಿ ಇಂಟೆಲ್, ಮುಂಬರುವ ದಿನಗಳಲ್ಲಿ ಜಾಗತಿಕವಾಗಿ 18 ಸಾವಿರ ಸಿಬ್ಬಂದಿ ವಜಾಗೊಳಿಸಲು ನಿರ್ಧರಿಸಿದೆ.
ಕಳೆದ ಎರಡು ವರ್ಷಗಳಿಂದ ಕಂಪನಿ ಸತತ ನಷ್ಟ ಅನುಭವಿಸುತ್ತಿರುವುದರಿಂದ ಸಿಬ್ಬಂದಿ ವಜಾಗೊಳಿಸಲು ಮುಂದಾಗಿರುವುದಾಗಿ ಕಂಪನಿಯ ಮೂಲಗಳು ತಿಳಿಸಿವೆ.
ಸದ್ಯ ಇಂಟೆಲ್ ಕಂಪನಿಯಲ್ಲಿ 1.24 ಲಕ್ಷ ಉದ್ಯೋಗಿಗಳಿದ್ದು, ಈ ಪೈಕಿ ಶೇ.15ರಷ್ಟು ಸಿಬ್ಬಂದಿ ಕಡಿತಕ್ಕೆ ಮುಂದಾಗಿದೆ. ಅಂದರೆ ಸರಿ ಸುಮಾರು 18 ಸಾವಿರ ಸಿಬ್ಬಂದಿ ಕೆಲಸ ಕಳೆದುಕೊಳ್ಳಲಿದ್ದಾರೆ.
ಜೂನ್ ತ್ರೈಮಾಸಿಕದಲ್ಲಿ ಕಂಪನಿ ₹13,401 ಕೋಟಿ ನಷ್ಟ ದಾಖಲಿಸಿದೆ. ಇದರಿಂದ ಕಂಪನಿಯ ಒಟ್ಟಾರೆ ವೆಚ್ಚವನ್ನು ಕಡಿತಗೊಳಿಸಲು ಯೋಜಿಸಿರುವುದರಿಂದ ಸಿಬ್ಬಂದಿ ಕೆಲಸ ಕಳೆದುಕೊಳ್ಳಲಿದ್ದಾರೆ.
ಕಳೆದ ಮೂರು ತಿಂಗಳ ಕಾರ್ಯನಿರ್ವಹಣೆ ತೃಪ್ತಿಕರವಾಗಿಲ್ಲ. ಉತ್ಪಾದನೆ ಮತ್ತು ತಂತ್ರಜ್ಞಾನದ ಪ್ರಕ್ರಿಯೆಯಲ್ಲಿ ನಾವು ನಷ್ಟ ಅನುಭವಿಸಿದ್ದೇವೆ ಎಂದು ಇಂಟೆಲ್‌ನ ಚೀಫ್ ಎಕ್ಸಿಕ್ಯೂಟಿವ್ ಪ್ಯಾಟ್ ಹೇಳಿದ್ದಾರೆ.
ಮುಂದಿನ ದಿನಗಳಲ್ಲೂ ನಮಗೆ ಹೆಚ್ಚಿನ ಸವಾಲುಗಳು ಎದುರಾಗುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.