ನವದೆಹಲಿ: ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ (ಎನ್‌ಎಸ್‌ಸಿ) ಸೇರಿದಂತೆ ಹಲವು ಸಣ್ಣ ಉಳಿತಾಯ ಯೋಜನೆಗಳ ಮೇಲಿನ ವಾರ್ಷಿಕ ಬಡ್ಡಿ ದರವನ್ನು ಕಡಿಮೆ ಮಾಡಲಾಗಿದೆ. ಪರಿಷ್ಕೃತ ಬಡ್ಡಿ ದರಗಳು ಏಪ್ರಿಲ್ 1ರಿಂದ (ಗುರುವಾರ) ಅನ್ವಯ ಆಗಲಿವೆ.
ಪಿಪಿಎಫ್ ಬಡ್ಡಿ ದರ ಕೂಡ ಇಳಿಕೆ ಆಗಿದೆ. ಈ ಇಳಿಕೆಗಳು ಏಪ್ರಿಲ್–ಜೂನ್ ತ್ರೈಮಾಸಿಕದಲ್ಲಿ (2021ರ ಜೂನ್ 30ರವರೆಗೆ) ಜಾರಿಯಲ್ಲಿ ಇರಲಿವೆ. ಕಿಸಾನ್ ವಿಕಾಸ ಪತ್ರ ಹೂಡಿಕೆಯ ಅವಧಿ ಇದುವರೆಗೆ 124 ತಿಂಗಳು ಆಗಿತ್ತು. ಇನ್ನು ಮುಂದೆ ಅದು 138 ತಿಂಗಳ ಅವಧಿಯ ಹೂಡಿಕೆ ಆಗಲಿದೆ.
ಸಣ್ಣ ಉಳಿತಾಯ ಯೋಜನೆಗಳ ಮೇಲೆ ಗರಿಷ್ಠ ಶೇ1.1ರವರೆಗೆ ಬಡ್ಡಿ ಇಳಿಕೆ ಆಗಿದೆ. ಈ ಯೋಜನೆಗಳ ಮೇಲಿನ ಬಡ್ಡಿಯನ್ನು ಪ್ರತಿ ಮೂರು ತಿಂಗಳಿಗೆ ಒಮ್ಮೆ ಪರಿಷ್ಕರಣೆ ಮಾಡಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.