ADVERTISEMENT

ಸೂಚ್ಯಂಕ 285 ಅಂಶ ಜಿಗಿತ

ಪಿಟಿಐ
Published 16 ಜೂನ್ 2018, 10:49 IST
Last Updated 16 ಜೂನ್ 2018, 10:49 IST
ಸೂಚ್ಯಂಕ 285 ಅಂಶ ಜಿಗಿತ
ಸೂಚ್ಯಂಕ 285 ಅಂಶ ಜಿಗಿತ   

ಮುಂಬೈ: ಸತತ ಎರಡನೇ ವಹಿವಾಟು ಅವಧಿಯಲ್ಲಿಯೂ ಷೇರುಪೇಟೆ ಸೂಚ್ಯಂಕಗಳು ಉತ್ತಮ ಏರಿಕೆ ದಾಖಲಿಸಿವೆ.

ದೇಶಿ ಸಾಂಸ್ಥಿಕ ಹೂಡಿಕೆ ಹೆಚ್ಚಾಗುತ್ತಿರುವುದರಿಂದ ಷೇರುಪೇಟೆ ವಹಿವಾಟು ಸಕಾರಾತ್ಮಕ ಮಟ್ಟದಲ್ಲಿ ಸಾಗುತ್ತಿದೆ ಎಂದು ದಲ್ಲಾಳಿಗಳು ಹೇಳಿದ್ದಾರೆ.

ರಿಯಲ್ ಎಸ್ಟೇಟ್‌, ಲೋಹ, ಇಂಧನ ಮತ್ತು ಬ್ಯಾಂಕಿಂಗ್‌ ಷೇರುಗಳು ಏರಿಕೆ ಕಂಡಿವೆ. ಸಣ್ಣ ಮತ್ತು ಮಧ್ಯಮ ಶ್ರೇಣಿ ಸೂಚ್ಯಂಕಗಳು ಖರೀದಿ ವಹಿವಾಟಿಗೆ ಒಳಗಾದವು.

ADVERTISEMENT

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ಗುರುವಾರದ ವಹಿವಾಟಿನಲ್ಲಿ 285 ಅಂಶ ಜಿಗಿತ ಕಂಡು 35,628 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 84 ಅಂಶ ಹೆಚ್ಚಾಗಿ 10,818 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ‘ಮುಂಗಾರು ಚುರುಕುಗೊಂಡಿರುವುದರಿಂದ ಗ್ರಾಮೀಣ ಆರ್ಥಿಕತೆಯ ಮುನ್ನೋಟ ಸಕಾರಾತ್ಮಕವಾಗಿರುವ ನಿರೀಕ್ಷೆ ಮಾಡಲಾಗುತ್ತಿದೆ. ಇದು ಆರ್ಥಿಕ ಪ್ರಗತಿಗೆ ಪೂರಕವಾಗಲಿದೆ’ ಎಂದು ಜಿಯೋಜಿತ್‌ ಫೈನಾನ್ಶಿಯಲ್ ಸರ್ವೀಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಅಭಿಪ್ರಾಯಪಟ್ಟಿದ್ದಾರೆ.

**

ಹಣದುಬ್ಬರ ಮತ್ತು ಆರ್ಥಿಕ ಪ್ರಗತಿಯ ಮಧ್ಯೆ ಸಮತೋಲನ ಕಾಯ್ದುಕೊಳ್ಳುವ ಆರ್‌ಬಿಐ ನೀತಿಯು ಷೇರುಪೇಟೆಗೆ ಹೊಸ ಉತ್ಸಾಹ ತುಂಬಿದೆ
– ವಿನೋದ್‌ ನಾಯರ್‌, ಜಿಯೋಜಿತ್‌ ಫೈನಾನ್ಶಿಯಲ್ ಸರ್ವೀಸಸ್‌ನ ಸಂಶೋಧನಾ ಮುಖ್ಯಸ್ಥ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.