ADVERTISEMENT

ಪೇಟೆಯಲ್ಲಿ ಚಂಚಲ ವಹಿವಾಟು

ಪಿಟಿಐ
Published 6 ಜುಲೈ 2018, 20:15 IST
Last Updated 6 ಜುಲೈ 2018, 20:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಶುಕ್ರವಾರ ದೇಶದ ಷೇರುಪೇಟೆಗಳಲ್ಲಿ ಚಂಚಲ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 83 ಅಂಶ ಏರಿಕೆ ಕಂಡು 35,657 ಅಂಶಗಳಲ್ಲಿ ದಿನದ ವಹಿವಾಟು ಅಂತ್ಯಕಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 22 ಅಂಶ ಹೆಚ್ಚಾಗಿ 10,772 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಅಮೆರಿಕ–ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಂಘರ್ಷದ ಪ್ರಭಾವದಿಂದ ಬಂಡವಾಳ ಹೂಡಿಕೆ ತಗ್ಗುತ್ತಿದೆ. ಲಾಭ ಗಳಿಕೆ ಉದ್ದೇಶದ ವಹಿವಾಟಿನಿಂದಾಗಿ ಸೂಚ್ಯಂಕ ಹೆಚ್ಚು ಏರಿಕೆ ಕಾಣಲು ಸಾಧ್ಯವಾಗಲಿಲ್ಲ. ಕಚ್ಚಾ ತೈಲ ದರ ಇಳಿಕೆ ಮತ್ತು ಬಾಂಡ್‌ ಗಳಿಕೆಯು ಸಕಾರಾತ್ಮಕ ವಹಿವಾಟು ನಡೆಯುವಂತೆ ಮಾಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.