ADVERTISEMENT

ಈಕ್ವಿಟಿ ಮ್ಯೂಚುವಲ್‌ ಫಂಡ್‌: ₹ 7,200 ಕೋಟಿ ಹೊರಹರಿವು

ಪಿಟಿಐ
Published 1 ನವೆಂಬರ್ 2020, 16:18 IST
Last Updated 1 ನವೆಂಬರ್ 2020, 16:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಈಕ್ವಿಟಿ ಮ್ಯೂಚುವಲ್‌ ಫಂಡ್‌ಗಳಿಂದ ಜುಲೈ–ಸೆಪ್ಟೆಂಬರ್‌ ಅವಧಿಯಲ್ಲಿ ₹ 7,200 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಹೂಡಿಕೆದಾರರು ₹ 23,874 ಕೋಟಿ ಹಣ ತೊಡಗಿಸಿದ್ದರು ಎಂದು ಭಾರತೀಯ ಮ್ಯೂಚುವಲ್‌ ಫಂಡ್‌ ಸಂಸ್ಥೆಗಳ ಒಕ್ಕೂಟ ಮಾಹಿತಿ ನೀಡಿದೆ.

ಬಂಡವಾಳ ಹೊರಹರಿವು ಆಗಿದ್ದರೂ ಈಕ್ವಿಟಿ ಮ್ಯೂಚುವಲ್‌ ಫಂಡ್‌ಗಳ ನಿರ್ವಹಣಾ ಸಂಪತ್ತು ₹ 7.24 ಲಕ್ಷ ಕೋಟಿಗಳಿಂದ ₹ 7.64 ಲಕ್ಷ ಕೋಟಿಗಳಿಗೆ ಏರಿದೆ.

ADVERTISEMENT

‘ಹೂಡಿಕೆದಾರರು ಮ್ಯೂಚುವಲ್‌ ಫಂಡ್‌ಗಳ ಮೂಲಕ ಹೂಡಿಕೆ ಮಾಡುವುದಕ್ಕಿಂತಲೂ ನೇರವಾಗಿ ಷೇರುಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇದರಿಂದಾಗಿ ಬಂಡವಾಳ ಹೊರಹರಿವು ಆಗಿದೆ’ ಎಂದು ಕ್ವಾಂಟಮ್‌ ಎಎಂಸಿನ ಸಹಾಯಕ ನಿಧಿ ನಿರ್ವಾಹಕ ನೀಲೇಶ್‌ ಶೆಟ್ಟಿ ಹೇಳಿದ್ದಾರೆ.

ಷೇರು ಮತ್ತು ಷೇರು ಸಂಬಂಧಿತ ಮ್ಯೂಚುವಲ್‌ ಫಂಡ್‌ ಯೋಜನೆಗಳಿಂದ ಜುಲೈ–ಸೆಪ್ಟೆಂಬರ್‌ ಅವಧಿಯಲ್ಲಿ ₹ 7,214 ಕೋಟಿ ಬಂಡವಾಳ ಹೊರಹೋಗಿದೆ.

ವ್ಯವಸ್ಥಿತ ಹೂಡಿಕೆ ಯೋಜನೆಯ (ಎಸ್‌ಐಪಿ) ಮೂಲಕ ಬಂಡವಾಳ ಒಳಹರಿವು ₹ 24,818 ಕೋಟಿಗಳಿಂದ ₹ 23,411 ಕೋಟಿಗಳಿಗೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.