ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್ಪಿಐ) ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ಏಪ್ರಿಲ್ ತಿಂಗಳ ಮೊದಲ ಐದು ವಹಿವಾಟು ಅವಧಿಯಲ್ಲಿ ₹ 8,634 ಕೋಟಿ ಹೂಡಿಕೆ ಮಾಡಿದ್ದಾರೆ.
ದೇಶಿ ಮತ್ತು ಜಾಗತಿಕ ಸಕಾರಾತ್ಮಕ ಅಂಶಗಳಿಂದಾಗಿ ಎಫ್ಪಿಐ ಒಳಹರಿವು ಹೆಚ್ಚಾಗುತ್ತಿದೆ. ಇದು ಇನ್ನೂ ಕೆಲವು ದಿನಗಳವರೆಗೆ ಮುಂದುವರಿಯಲಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.
ಮಾರ್ಚ್ನಲ್ಲಿ ₹ 45,981 ಕೋಟಿ ಹೂಡಿಕೆ ಮಾಡಿದ್ದರು.2018–19ನೇ ಹಣಕಾಸು ವರ್ಷದಲ್ಲಿ ₹ 44,500 ಕೋಟಿ ಮೌಲ್ಯದ ಷೇರು ಮತ್ತು ಸಾಲಪತ್ರಗಳನ್ನು ಮಾರಾಟ ಮಾಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.