ADVERTISEMENT

ವಿದೇಶಿ ಬಂಡವಾಳ ಹೂಡಿಕೆ ₹49,553 ಕೋಟಿ

ಪಿಟಿಐ
Published 22 ನವೆಂಬರ್ 2020, 10:35 IST
Last Updated 22 ನವೆಂಬರ್ 2020, 10:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ನವೆಂಬರ್‌ 3 ರಿಂದ 20ರವರೆಗಿನ ಅವಧಿಯಲ್ಲಿ ಭಾರತದ ಮಾರುಕಟ್ಟೆಯಲ್ಲಿ ₹ 49,553 ಕೋಟಿ ಹೂಡಿಕೆ ಮಾಡಿದ್ದಾರೆ.

ಹೂಡಿಕೆದಾರರು ಷೇರುಪೇಟೆಯಲ್ಲಿ ₹ 44,378 ಕೋಟಿ ಹಾಗೂ ಸಾಲಪತ್ರಗಳ ಮಾರುಕಟ್ಟೆಯಲ್ಲಿ ₹ 5,175 ಕೋಟಿ ಹೂಡಿಕೆ ಮಾಡಿದ್ದಾರೆ. ಇದರಿಂದ ಒಟ್ಟಾರೆ ಹೂಡಿಕೆ ₹49,553 ಕೋಟಿಗಳಷ್ಟಾಗಿದೆ.

ಅಕ್ಟೋಬರ್‌ ತಿಂಗಳಿನಲ್ಲಿ ₹ 22,033 ಕೋಟಿ ಹೂಡಿಕೆ ಮಾಡಿದ್ದರು.

ADVERTISEMENT

‘ಜಾಗತಿಕ ಆರ್ಥಿಕತೆ ಸ್ಥಿತಿ ಸುಧಾರಿಸುತ್ತಿದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಕುರಿತು ಸ್ಪಷ್ಟತೆ ಮೂಡಿದೆ. ಈ ಅಂಶಗಳಿಂದಾಗಿ ವಿದೇಶಿ ಬಂಡವಾಳ ಒಳಹರಿವು ಹೆಚ್ಚಾಗುತ್ತಿದೆ’ ಎಂದು ಗ್ರೋವ್‌ ಸಂಸ್ಥೆಯ ಸಹ ಸ್ಥಾಪಕ ಹರ್ಷ್‌ ಜೈನ್‌ ಹೇಳಿದ್ದಾರೆ.

‘ಜಾಗತಿಕ ವ್ಯಾಪಾರ ಸುಧಾರಿಸುತ್ತಿದೆ. ಜಾಗತಿಕ ಆರ್ಥಿಕತೆಯಲ್ಲಿ ಚೇತರಿಕೆಯ ಲಕ್ಷಣ ಕಾಣುತ್ತಿದೆ. ಈ ವಿದ್ಯಮಾನಗಳೂ ಸಹ ಭಾರತದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ‌ಮಾರುಕಟ್ಟೆಗಳಲ್ಲಿ ಹೂಡಿಕೆ ಹೆಚ್ಚಾಗುತ್ತಿದೆ’ ಎಂದೂ ಅವರು ತಿಳಿಸಿದ್ದಾರೆ.

‘ಕೋವಿಡ್‌–19ಯ ಎರಡನೇ ಅಲೆಯನ್ನು ನಿಯಂತ್ರಿಸಲು ಅಮೆರಿಕದ ಫೆಡರಲ್‌ ರಿಸರ್ವ್‌ ಮತ್ತು ಇತರೆ ಕೇಂದ್ರೀಯ ಬ್ಯಾಂಕ್‌ಗಳು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಇದರಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಿನ ಹಣ ಹರಿದುಬರುವಂತೆ ಮಾಡುತ್ತಿವೆ’ ಎಂದು ಕೋಟಕ್‌ ಸೆಕ್ಯುರಿಟೀಸ್‌ ಲಿಮಿಟೆಡ್‌ನ ಕಾರ್ಯಕಾರಿ ಉಪಾಧ್ಯಕ್ಷ ರುಸ್ಮಿಕ್‌ ಓಜಾ ಹೇಳಿದ್ದಾರೆ.

ಡಾಲರ್‌ ಮೌಲ್ಯ ಇಳಿಕೆ ಮತ್ತು ಬಂಡವಾಳ ಲಭ್ಯತೆ ಹೆಚ್ಚಾಗುವುದರಿಂದ ಮುಂದಿನ ದಿನಗಳಲ್ಲಿ ಭಾರತದ ಮೇಲೆ ‘ಎಫ್‌ಪಿಐ’ ಒಳಹರಿವು ಹೆಚ್ಚಾಗಲಿದೆ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.