ADVERTISEMENT

ಎಚ್‌–1ಬಿ ವೀಸಾ ಪರಿಣಾಮ: ಷೇರು ಸೂಚ್ಯಂಕ ಇಳಿಕೆ

ಪಿಟಿಐ
Published 22 ಸೆಪ್ಟೆಂಬರ್ 2025, 15:43 IST
Last Updated 22 ಸೆಪ್ಟೆಂಬರ್ 2025, 15:43 IST
ಮುಂಬೈ ಷೇರುಪೇಟೆ
ಮುಂಬೈ ಷೇರುಪೇಟೆ   

ಮುಂಬೈ: ಅಮೆರಿಕದ ಎಚ್‌–1ಬಿ ವೀಸಾ ಶುಲ್ಕ ಹೆಚ್ಚಳದ ನಿರ್ಧಾರದ ಪರಿಣಾಮವಾಗಿ ದೇಶದ ಮಾಹಿತಿ ತಂತ್ರಜ್ಞಾನ ವಲಯದ ಕಂಪನಿಗಳ ಷೇರಿನ ಮೌಲ್ಯವು ಇಳಿದಿದೆ. ಹೀಗಾಗಿ, ಸೋಮವಾರ ನಡೆದ ವಹಿವಾಟಿನಲ್ಲಿ ಷೇರುಪೇಟೆ ಸೂಚ್ಯಂಕಗಳು ಇಳಿಕೆ ಕಂಡಿವೆ.

ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದು ಸಹ ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಷೇರುಪೇಟೆ ಸೂಚ್ಯಂಕಗಳ ಇಳಿಕೆಯಿಂದ ಕಂಪನಿಗಳ ಮಾರುಕಟ್ಟೆ ಬಂಡವಾಳ ಮೌಲ್ಯ ₹83,994 ಕೋಟಿ ಕರಗಿದೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 466 ಅಂಶ ಇಳಿಕೆಯಾಗಿ, 82,159ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ 124 ಅಂಶ ಕಡಿಮೆಯಾಗಿ, 25,202ಕ್ಕೆ ಕೊನೆಗೊಂಡಿದೆ.

ADVERTISEMENT

ಟೆಕ್ ಮಹೀಂದ್ರ, ಟಿಸಿಎಸ್, ಇನ್ಫೊಸಿಸ್, ಎಚ್‌ಸಿಎಲ್‌ ಟೆಕ್, ಟಾಟಾ ಮೋಟರ್ಸ್, ಟ್ರೆಂಟ್, ರಿಲಯನ್ಸ್ ಇಂಡಸ್ಟ್ರೀಸ್, ಲಾರ್ಸೆನ್ ಆ್ಯಂಡ್ ಟೊಬ್ರೊ ಷೇರಿನ ಮೌಲ್ಯ ಇಳಿಕೆ ಕಂಡಿದೆ. ಎಟರ್ನಲ್‌, ಬಜಾಜ್ ಫೈನಾನ್ಸ್, ಅದಾನಿ ಪೋರ್ಟ್‌ ಮತ್ತು ಅಲ್ಟ್ರಾಟೆಕ್ ಸಿಮೆಂಟ್‌ನ ಷೇರಿನ ಮೌಲ್ಯದಲ್ಲಿ ಏರಿಕೆ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.