
ಷೇರುಪೇಟೆ
(ಪಿಟಿಐ ಚಿತ್ರ)
ಮುಂಬೈ: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಟ್ಟ ಬೆನ್ನಲೇ ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರ ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 441 ಅಂಶ ಏರಿಕೆಯಾಗಿ, 84,022ರಲ್ಲಿ ವಹಿವಾಟು ಆರಂಭಿಸಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 129 ಅಂಶ ಹೆಚ್ಚಳವಾಗಿ, 25,822ಕ್ಕೆ ತಲುಪಿವೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಟೈಟಾನ್, ಎಟರ್ನಲ್, ಕೋಟಕ್ ಮಹೀಂದ್ರಾ ಬ್ಯಾಂಕ್, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್, ಟಾಟಾ ಸ್ಟೀಲ್, ಸನ್ ಫಾರ್ಮಾಸ್ಯುಟಿಕಲ್ಸ್, ಲಾರ್ಸೆನ್ & ಟೂಬ್ರೊ, ಅದಾನಿ ಪೋರ್ಟ್ಸ್, ಇಂಡಿಗೊ, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಭಾರ್ತಿ ಏರ್‌ಟೆಲ್ ಲಾಭ ಗಳಿಸಿವೆ.
ಮತ್ತೊಂದೆಡೆ, ಪವರ್‌ಗ್ರಿಡ್, ಐಟಿಸಿ, ಹಿಂದೂಸ್ತಾನ್ ಯೂನಿಲಿವರ್, ಬಜಾಜ್ ಫೈನಾನ್ಸ್, ಟ್ರೆಂಟ್, ಇನ್ಫೊಸಿಸ್, ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಎನ್‌ಟಿಪಿಸಿ, ಟೆಕ್ ಮಹೀಂದ್ರಾ, ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್, ಎಚ್‌ಡಿಎಫ್‌ಸಿ ಬ್ಯಾಂಕ್ ನಷ್ಟ ಕಂಡಿವೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಶುಕ್ರವಾರ ₹1,950.77 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ ಎಂದು ವಿನಿಮಯ ದತ್ತಾಂಶಗಳು ತಿಳಿಸಿವೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.94ರಷ್ಟು ಇಳಿಕೆಯಾಗಿದೆ. ಪ್ರತಿ ಬ್ಯಾರಲ್ ಬೆಲೆ 67.41 ಡಾಲರ್ ಆಗಿದೆ.
ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದದಿಂದಾಗಿ ದೇಶೀಯ ಹೂಡಿಕೆದಾರರಲ್ಲಿ ಭರವಸೆ ಹೆಚ್ಚಳವಾಗಿದೆ. ಇದು ಸಹ ಸೂಚ್ಯಂಕಗಳ ಏರಿಕೆ ನೆರವಾಯಿತು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.