ADVERTISEMENT

ಎಫ್‌ಐಐ ಒಳಹರಿವು: ಸೂಚ್ಯಂಕ ಏರಿಕೆ

ಪಿಟಿಐ
Published 20 ನವೆಂಬರ್ 2025, 15:42 IST
Last Updated 20 ನವೆಂಬರ್ 2025, 15:42 IST
ಸೂಚ್ಯಂಕ
ಸೂಚ್ಯಂಕ   

ಮುಂಬೈ: ತೈಲ ಮತ್ತು ಅನಿಲ ಹಾಗೂ ಆಯ್ದ ಹಣಕಾಸು ಕಂಪನಿಗಳ ಷೇರುಗಳ ಖರೀದಿ ಹೆಚ್ಚಳದಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಗುರುವಾರದ ವಹಿವಾಟಿನಲ್ಲಿ ಏರಿಕೆ ಕಂಡಿವೆ.

ವಿದೇಶಿ ಬಂಡವಾಳದ ಒಳಹರಿವು (ಎಫ್‌ಐಐ) ಸಹ ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ನೆರವಾದವು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. 

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 446 ಅಂಶ ಏರಿಕೆಯಾಗಿ, 85,632ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 139 ಅಂಶ ಹೆಚ್ಚಳವಾಗಿ, 26,192ಕ್ಕೆ ಕೊನೆಗೊಂಡಿದೆ.

ADVERTISEMENT

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬುಧವಾರದ ವಹಿವಾಟಿನಲ್ಲಿ ₹1,580 ಕೋಟಿ ಮೌಲ್ಯದಷ್ಟು ಷೇರುಗಳನ್ನು ಖರೀದಿ ಮಾಡಿದ್ದರೆ, ದೇಶದ ಹೂಡಿಕೆದಾರರು ₹1,360 ಕೋಟಿ ಮೌಲ್ಯದ ಷೇರು ಖರೀದಿಸಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.83ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರಲ್ ಕಚ್ಚಾ ತೈಲದ ಬೆಲೆ 64.03 ಡಾಲರ್ ಆಗಿದೆ.

‘ಭಾರತ ಮತ್ತು ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಹೂಡಿಕೆದಾರರಲ್ಲಿ ಆಶಾವಾದ ಹೆಚ್ಚಳವಾಗಿದೆ. ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ತಂತ್ರಜ್ಞಾನ ವಲಯದ ಕಂಪನಿಗಳ ಹಣಕಾಸು ಫಲಿತಾಂಶ ಸದೃಢವಾಗಿದೆ. ವಿದೇಶಿ ಬಂಡವಾಳದ ಒಳಹರಿವು ಹೆಚ್ಚಳವಾಗಿದೆ. ಇದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಏರಿಕೆ ಕಂಡಿವೆ’ ಎಂದು ಜಿಯೋಜಿತ್ ಇನ್ವೆಸ್ಟ್‌ಮೆಂಟ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.