ADVERTISEMENT

ಗಳಿಕೆ ಹಾದಿಗೆ ಷೇರುಪೇಟೆ: ಎಚ್‌ಡಿಎಫ್‌ಸಿ, ಐಸಿಐಸಿಐ ಬ್ಯಾಂಕ್‌ ಷೇರು ಬೆಲೆ ಏರಿಕೆ

ಪಿಟಿಐ
Published 10 ಜೂನ್ 2020, 11:37 IST
Last Updated 10 ಜೂನ್ 2020, 11:37 IST
ಷೇರುಪೇಟೆ
ಷೇರುಪೇಟೆ   

ಮುಂಬೈ: ರಿಲಯನ್ಸ್‌ ಇಂಡಸ್ಟ್ರೀಸ್‌, ಎಚ್‌ಡಿಎಫ್‌ಸಿ ಮತ್ತು ಐಸಿಐಸಿಐ ಬ್ಯಾಂಕ್‌ ಷೇರುಗಳ ಮೌಲ್ಯ ಹೆಚ್ಚಳದಿಂದಾಗಿ ಬುಧವಾರದ ವಹಿವಾಟಿನಲ್ಲಿ ಮುಂಬೈ ಷೇರುಪೇಟೆಯು ಸಕಾರಾತ್ಮಕ ಹಾದಿಗೆ ಮರಳಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ಮತ್ತೆ 10 ಸಾವಿರದ ಗಡಿ ದಾಟಿತು.

ಮಧ್ಯಂತರ ವಹಿವಾಟಿನಲ್ಲಿ 34,350 ಅಂಶಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದ್ದ ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ ದಿನದ ಅಂತ್ಯದ ವೇಳೆಗೆ 290 ಅಂಶಗಳ ಏರಿಕೆಯೊಂದಿಗೆ 34,247ರಲ್ಲಿ ವಹಿವಾಟು ಅಂತ್ಯಗೊಳಿಸಿತು.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 69 ಅಂಶ ಹೆಚ್ಚಾಗಿ 10,116 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ADVERTISEMENT

ಇಂಡಸ್‌ಇಂಡ್‌ ಬ್ಯಾಂಕ್‌ ಷೇರು ಶೇ 8ರಷ್ಟು ಗರಿಷ್ಠ ಏರಿಕೆ ಕಂಡಿದೆ. ಕೋಟಕ್‌ ಬ್ಯಾಂಕ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ಎಚ್‌ಡಿಎಫ್‌ಸಿ, ಆ್ಯಕ್ಸಿಸ್‌ ಬ್ಯಾಂಕ್‌ ಮತ್ತು ಎಸ್‌ಬಿಐ ಷೇರುಗಳೂ ಏರಿಕೆ ಕಂಡಿವೆ.

ಹೀರೊ ಮೊಟೊ ಕಾರ್ಪ್‌, ಟಾಟಾ ಸ್ಟೀಲ್‌, ಬಜಾಜ್‌ ಫೈನಾನ್ಸ್‌ ಮತ್ತು ಒಎನ್‌ಜಿಸಿ ಷೇರುಗಳು ಇಳಿಕೆ ಕಂಡಿವೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರ ₹ 491 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಜಾಗತಿಕ ಮಟ್ಟದಲ್ಲಿ ಶಾಂಘೈ ಮತ್ತು ಹಾಂಗ್‌ಕಾಂಗ್‌ ಷೇರುಗಳು ಇಳಿಕೆ ಕಂಡಿವೆ. ಯುರೋಪ್‌ನಲ್ಲಿ ಷೇರುಪೇಟೆಗಳ ಆರಂಭದ ವಹಿವಾಟು ಇಳಿಮುಖವಾಗಿದ್ದವು.

ಜಾಗತಿಕ ಹೂಡಿಕೆದಾರರು ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಆದ ಫೆಡರಲ್‌ ರಿಸರ್ವ್‌ನ ಬಡ್ಡಿದರ ಪರಾಮರ್ಶೆಯನ್ನು ಎದುರು ನೋಡುತ್ತಿದ್ದಾರೆ. ಇಲ್ಲಿ ಹೊರಬೀಳಲಿರುವ ನಿರ್ಧಾರಗಳು ಮುಂದಿನ ದಿನಗಳಲ್ಲಿ ಹೂಡಿಕೆ ಚಟುವಟಿಕೆಯ ಮೇಲೆ ಪರಿಣಾಮ ಬೀರಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.