ಮುಂಬೈ: ಸತತ ಎರಡನೇ ದಿನವಾದ ಗುರುವಾರವೂ ದೇಶದ ಷೇರುಪೇಟೆಯಲ್ಲಿ ಗೂಳಿ ಓಟ ಮುಂದುವರಿಯಿತು. ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳ ಖರೀದಿ ಹೆಚ್ಚಳ ಹಾಗೂ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟಿಗೆ ನೆರವಾಯಿತು.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 610 ಅಂಶ ಏರಿಕೆ ಕಂಡು, 74,340 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 207 ಅಂಶ ಹೆಚ್ಚಳ ಕಂಡು 22,544 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿನ ಏಷ್ಯನ್ ಪೇಂಟ್ಸ್, ಎನ್‌ಪಿಟಿಸಿ, ರಿಲಯನ್ಸ್ ಇಂಡಸ್ಟ್ರೀಸ್, ಟಾಟಾ ಸ್ಟೀಲ್, ಬಜಾಜ್ ಫಿನ್‌ಸರ್ವ್, ಎಚ್‌ಯುಎಲ್, ಸನ್ ಫಾರ್ಮಾ, ಅದಾನಿ ಪೋರ್ಟ್ಸ್, ಎಕ್ಸಿಸ್ ಬ್ಯಾಂಕ್, ಟಿಸಿಎಸ್, ಟೈಟನ್, ಬಜಾಜ್ ಫೈನಾನ್ಸ್ ಷೇರಿನ ಮೌಲ್ಯದಲ್ಲಿ ಹೆಚ್ಚಳವಾಗಿದೆ.
ಬಿಎಸ್‌ಇ ಸ್ಮಾಲ್ ಕ್ಯಾಪ್ ಶೇ 1.63ರಷ್ಟು ಹಾಗೂ ಮಿಡ್ ಕ್ಯಾಪ್ ಸೂಚ್ಯಂಕ ಶೇ 0.65ರಷ್ಟು ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.