ADVERTISEMENT

ಸೂಚ್ಯಂಕ 1,011 ಅಂಶ ಕುಸಿತ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2020, 18:25 IST
Last Updated 21 ಏಪ್ರಿಲ್ 2020, 18:25 IST
   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಮಂಗಳವಾರ ನಡೆದ ಅತಿಯಾದ ಮಾರಾಟದ ಒತ್ತಡದಿಂದಾಗಿ ಸೂಚ್ಯಂಕಗಳು ಶೇ 3ಕ್ಕೂ ಹೆಚ್ಚಿನ ಕುಸಿತ ಕಂಡಿವೆ.

ಕೊರೊನಾ ಸೃಷ್ಟಿಸಿರುವ ಆತಂಕದ ಜತೆಗೆ ಕಚ್ಚಾ ತೈಲ ದರ ಐತಿಹಾಸಿಕ ಮಟ್ಟಕ್ಕೆ ಕುಸಿತ ಕಂಡಿರುವುದು ಷೇರುಪೇಟೆಗಳಲ್ಲಿ ಕರಡಿ ಕುಣಿತಕ್ಕೆ ಕಾರಣವಾಯಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 1,011 ಅಂಶ ಕುಸಿತ ಕಂಡು 30,637 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ADVERTISEMENT

ಗರಿಷ್ಠ ನಷ್ಟ: ಇಂಡಸ್‌ ಇಂಡ್‌ ಬ್ಯಾಂಕ್‌ ಷೇರು ಶೇ 12ಕ್ಕೂ ಹೆಚ್ಚಿನ ಕುಸಿತ ಕಂಡಿತು. ಬಜಾಜ್‌ ಫೈನಾನ್ಸ್‌, ಐಸಿಐಸಿಐ ಬ್ಯಾಂಕ್‌, ಆ್ಯಕ್ಸಿಸ್‌ ಬ್ಯಾಂಕ್‌, ಟಾಟಾ ಸ್ಟೀಲ್‌, ಮಹೀಂದ್ರಾ, ಒಎನ್‌ಜಿಸಿ ಮತ್ತು ಮಾರುತಿ ಷೇರುಗಳು ಶೇ 6 ರಿಂದ ಶೇ 9ರವರೆಗೂ ಇಳಿಕೆ ಕಂಡವು.

ಶಾಂಘೈ, ಹಾಂಗ್‌ಕಾಂಗ್‌, ಟೋಕಿಯೊ ಮತ್ತು ಸೋಲ್‌ ಷೇರುಪೇಟೆಗಳು ನಷ್ಟ ಅನುಭವಿಸಿವೆ. ಯುರೋಪ್‌ ಷೇರುಪೇಟೆಗಳಲ್ಲಿಯೂ ಇಳಿಮುಖ ವಹಿವಾಟು ನಡೆಯಿತು.

ರೂಪಾಯಿ 30 ಪೈಸೆ ಇಳಿಕೆ

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 30 ಪೈಸೆ ಇಳಿಕೆಯಾಗಿ ಒಂದು ಡಾಲರ್‌ಗೆ ₹ 76.83ರಂತೆ ವಿನಿಮಯಗೊಂಡಿತು.

ಜಾಗತಿಕ ಮಾರುಕಟ್ಟೆಯಲ್ಲಿ ಡಾಲರ್‌ ಮೌಲ್ಯ ವೃದ್ಧಿ ಹಾಗೂ ಮಾರುಕಟ್ಟೆ ಚಂಚಲವಾಗಿರುವುದರಿಂದ ಹೂಡಿಕೆದಾರರು ಸುರಕ್ಷಿತ ಹೂಡಿಕೆಯತ್ತ ಮುಖಮಾಡಿದ್ದಾರೆ. ಇದು ರೂಪಾಯಿ ಮೌಲ್ಯ ಇಳಿಕೆಗೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.