ADVERTISEMENT

ಷೇರುಪೇಟೆ: 4 ದಿನದಲ್ಲಿ ₹ 7.68 ಲಕ್ಷ ಕೋಟಿ ಸಂಪತ್ತು ವೃದ್ಧಿ

ಪಿಟಿಐ
Published 30 ಏಪ್ರಿಲ್ 2020, 20:00 IST
Last Updated 30 ಏಪ್ರಿಲ್ 2020, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ/ನವದೆಹಲಿ: ದೇಶದ ಷೇರುಪೇಟೆಗಳಲ್ಲಿ ಸತತ ನಾಲ್ಕನೇ ದಿನವೂ ಸಕಾರಾತ್ಮಕ ವಹಿವಾಟು ನಡೆದಿದ್ದು, ಹೂಡಿಕೆದಾರರ ಸಂಪತ್ತು ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಒಟ್ಟಾರೆ ₹ 7.68 ಲಕ್ಷ ಕೋಟಿ ವೃದ್ಧಿಯಾಗಿದೆ.

ಮುಂಬೈ ಷೇರುಪೇಟೆಯ ಬಂಡವಾಳ ಮೌಲ್ಯ ₹ 129 ಲಕ್ಷ ಕೋಟಿಗೆ ಏರಿಕೆಯಾಗಿದೆ.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕವು ಗುರುವಾರ 997 ಅಂಶ ಜಿಗಿತ ಕಂಡು 33,717 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ADVERTISEMENT

ಬಿಎಸ್‌ಇ ಮಧ್ಯಮ ಮತ್ತು ಸಣ್ಣ ಶ್ರೇಣಿ ಸೂಚ್ಯಂಕಗಳು ಶೇ 1.46ರವರೆಗೂ ಏರಿಕೆ ಕಂಡಿವೆ.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ಸೂಚ್ಯಂಕ ನಿಫ್ಟಿ 307 ಅಂಶ ಹೆಚ್ಚಾಗಿ 9,860 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು.

ದಿನದ ವಹಿವಾಟಿನಲ್ಲಿ ಒಎನ್‌ಜಿಸಿ ಶೇ 13.40ರಷ್ಟು ಗರಿಷ್ಠ ಗಳಿಕೆ ಕಂಡುಕೊಂಡಿತು.

2009ರ ಏಪ್ರಿಲ್‌ ಬಳಿಕ ಎನ್‌ಎಸ್‌ಇ ನಿಫ್ಟಿ ವಹಿವಾಟಿನ ಉತ್ತಮ ಗಳಿಕೆ ಕಂಡಿತು.

ರೂಪಾಯಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 57 ಪೈಸೆ ಜಿಗಿತ ಕಂಡು ಒಂದು ಡಾಲರ್‌ಗೆ ₹75.09ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.