ADVERTISEMENT

2021–22: ಹೂಡಿಕೆದಾರರ ಸಂಪತ್ತು ₹ 59.75 ಲಕ್ಷ ಕೋಟಿ ವೃದ್ಧಿ

ಪಿಟಿಐ
Published 31 ಮಾರ್ಚ್ 2022, 16:05 IST
Last Updated 31 ಮಾರ್ಚ್ 2022, 16:05 IST
 ಷೇರುಪೇಟೆ
ಷೇರುಪೇಟೆ   

ನವದೆಹಲಿ: ಷೇರುಪೇಟೆಯಲ್ಲಿ ನೋಂದಾಯಿತ ಹೂಡಿಕೆದಾರರ ಸಂಪತ್ತು ಮೌಲ್ಯವು 2021–22ನೇ ಹಣಕಾಸು ವರ್ಷದಲ್ಲಿ ₹ 59.75 ಲಕ್ಷ ಕೋಟಿಯಷ್ಟು ಹೆಚ್ಚಾಗಿದೆ.

ಸೆನ್ಸೆಕ್ಸ್‌ ಶೇಕಡ 18ರಷ್ಟಕ್ಕಿಂತ ಹೆಚ್ಚು ಏರಿಕೆ ಕಂಡಿದ್ದರಿಂದ ಹೂಡಿಕೆದಾರರ ಸಂಪತ್ತು ಮೌಲ್ಯದಲ್ಲಿ ಈ ಪ್ರಮಾಣದ ಏರಿಕೆ ಕಂಡುಬಂದಿದೆ. ಮಾರ್ಚ್‌ 31ರ ಅಂತ್ಯಕ್ಕೆ ಷೇರುಪೇಟೆಯ ಒಟ್ಟಾರೆ ಬಂಡವಾಳ ಮೌಲ್ಯ ₹ 264.06 ಲಕ್ಷ ಕೋಟಿಗಳಿಗೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT