ಮುಂಬೈ: ಸತತ ಎರಡು ವಹಿವಾಟುಗಳಲ್ಲಿ ಇಳಿಕೆ ಕಂಡಿದ್ದ ದೇಶದ ಷೇರುಪೇಟೆಯು ಮಂಗಳವಾರ ಚೇತರಿಕೆ ಕಂಡಿದೆ.
ರಿಲಯನ್ಸ್ಇಂ ಡಸ್ಟ್ರೀಸ್, ಐಸಿಐಸಿಐ ಬ್ಯಾಂಕ್ ಹಾಗೂ ಎಲ್ ಆ್ಯಂಡ್ ಟಿ ಕಂಪನಿಗಳ ಷೇರು ಖರೀದಿ ಹೆಚ್ಚಳದಿಂದಾಗಿ ಮಾರುಕಟ್ಟೆಯಲ್ಲಿ ಸಕಾರಾತ್ಮಕ ವಹಿವಾಟು ನಡೆಯಿತು.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 234 ಅಂಶ ಏರಿಕೆ ಕಂಡು, 78,199 ಅಂಶಗಳಲ್ಲಿ ಸ್ಥಿರಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 91 ಅಂಶ ಏರಿಕೆ ಕಂಡು, 23,707 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು.
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 5 ಪೈಸೆ ಕುಸಿತ ಕಂಡಿದೆ. ಪ್ರತೀ ಡಾಲರ್ ಮೌಲ್ಯ ₹85.73 ಆಗಿದೆ.
ಸೋಮವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹2,575 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 0.12ರಷ್ಟು ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್‌ಗೆ 76.21 ಡಾಲರ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.