ನವದೆಹಲಿ: ಷೇರುಪೇಟೆಯಲ್ಲಿ ನೋಂದಾಯಿತ ಪ್ರಮುಖ 10 ಕಂಪನಿಗಳಲ್ಲಿ 7 ಕಂಪನಿಗಳ ಮಾರುಕಟ್ಟೆ ಮೌಲ್ಯ ಹಿಂದಿನ ವಾರದ ವಹಿವಾಟಿನಲ್ಲಿ ₹ 67,622 ಕೋಟಿಗಳಷ್ಟು ಹೆಚ್ಚಾಗಿದೆ.
ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಮಾರುಕಟ್ಟೆ ಮೌಲ್ಯ ಗರಿಷ್ಠ ಏರಿಕೆ ಕಂಡಿದೆ. ಎಚ್‌ಡಿಎಫ್‌ಸಿ ಬ್ಯಾಂಕ್ ಮಾರುಕಟ್ಟೆ ಮೌಲ್ಯ ₹ 28,183 ಕೋಟಿ ಹೆಚ್ಚಾಗಿದ್ದು, ಒಟ್ಟಾರೆ ಮೌಲ್ಯ ₹ 5.97 ಲಕ್ಷ ಕೋಟಿಗೆ ತಲುಪಿದೆ. ಐಸಿಐಸಿಐ ಬ್ಯಾಂಕ್ ಮಾರುಕಟ್ಟೆ ಮೌಲ್ಯದಲ್ಲಿ ₹ 21,840 ಕೋಟಿ ಹೆಚ್ಚಾಗಿ ₹ 2.56 ಲಕ್ಷ ಕೊಟಿಗೆ ಏರಿಕೆಯಾಗಿದೆ.
ರಿಲಯನ್ಸ್ ಇಂಡಸ್ಟ್ರೀಸ್, ಇನ್ಫೊಸಿಸ್ ಮತ್ತು ಭಾರ್ತಿ ಏರ್‌ಟೆಲ್ ಕಂಪನಿಗಳ ಮಾರುಕಟ್ಟೆ ಮೌಲ್ಯದಲ್ಲಿ ಇಳಿಕೆ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.