ADVERTISEMENT

ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು

ಪಿಟಿಐ
Published 17 ನವೆಂಬರ್ 2018, 17:11 IST
Last Updated 17 ನವೆಂಬರ್ 2018, 17:11 IST

ಮುಂಬೈ: ವಿದೇಶಿ ಸಾಂಸ್ಥಿಕ ಬಂಡವಾಳ ಒಳಹರಿ ಹಾಗೂ ರೂಪಾಯಿ ಮೌಲ್ಯ ಚೇತರಿಕೆಯಿಂದ ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟು ಮುಂದುವರಿದಿದೆ.

2ನೇ ವಾರದಲ್ಲಿಯೂ ಸಕಾರಾತ್ಮಕ ವಹಿವಾಟು ನಡೆಯಿತು.ಮುಂಬೈ ಷೇರುಪೇಟೆ ಸೂಚ್ಯಂಕ ವಾರದ ವಹಿವಾಟಿನಲ್ಲಿ 298 ಅಂಶ ಏರಿಕೆ ಕಂಡು 35,457 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ವಾರದ ವಹಿವಾಟಿನಲ್ಲಿ ₹ 2 ಸಾವಿರ ಕೋಟಿಗೂ ಅಧಿಕ ಮೊತ್ತ ಹೂಡಿಕೆ ಮಾಡಿದ್ದಾರೆ.

ADVERTISEMENT

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (ಆರ್‌ಐಎಲ್‌) ಮೊದಲ ಸ್ಥಾನಕ್ಕೇರಿದೆ. ಮಾರುಕಟ್ಟೆ ಮೌಲ್ಯ ₹ 7.14 ಲಕ್ಷ ಕೋಟಿಗೆ ಏರಿಕೆಯಾಗಿದೆ. ಟಿಸಿಎಸ್‌ ಎರಡನೇ ಸ್ಥಾನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.