ADVERTISEMENT

ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಪಿಟಿಐ
Published 2 ಜುಲೈ 2025, 15:54 IST
Last Updated 2 ಜುಲೈ 2025, 15:54 IST
ಸೆನ್ಸೆಕ್ಸ್
ಸೆನ್ಸೆಕ್ಸ್   

ಮುಂಬೈ (ಪಿಟಿಐ): ಎಚ್‌ಡಿಎಫ್‌ಸಿ ಬ್ಯಾಂಕ್‌, ಎಲ್‌ ಆ್ಯಂಡ್‌ ಟಿ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ನ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ಷೇರುಪೇಟೆ ಸೂಚ್ಯಂಕಗಳು ಬುಧವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ. 

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 287 ಅಂಶ ಇಳಿಕೆಯಾಗಿ, 83,409ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 88 ಅಂಶ ಕಡಿಮೆಯಾಗಿ, 25,453ಕ್ಕೆ ಕೊನೆಗೊಂಡಿದೆ.

ಅಮೆರಿಕವು ಪ್ರತಿಸುಂಕ ವಿಧಿಸುವುದಕ್ಕೆ ನೀಡಿದ್ದ ವಿರಾಮವು ಮುಕ್ತಾಯಗೊಳ್ಳುತ್ತಿದೆ. ಇದು ಹೂಡಿಕೆದಾರರನ್ನು ಎಚ್ಚರಿಕೆಯ ನಡೆ ಅನುಸರಿಸುವಂತೆ ಮಾಡಿದೆ. ಜೂನ್‌ ತ್ರೈಮಾಸಿಕದ ಫಲಿತಾಂಶದತ್ತ ಮಾರುಕಟ್ಟೆ ಚಿತ್ತ ಹರಿಸಿರುವುದು ಮತ್ತು ವಿದೇಶಿ ಬಂಡವಾಳದ ಹೊರಹರಿವು ಷೇರುಪೇಟೆ ಸೂಚ್ಯಂಕಗಳ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ADVERTISEMENT

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರದ ವಹಿವಾಟಿನಲ್ಲಿ ₹1,970 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.86ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರೆಲ್‌ ದರವು 67.69 ಡಾಲರ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.