ADVERTISEMENT

Share Market | ಷೇರು ಸೂಚ್ಯಂಕ ಇಳಿಕೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2025, 13:42 IST
Last Updated 7 ಫೆಬ್ರುವರಿ 2025, 13:42 IST
<div class="paragraphs"><p>ಷೇರುಪೇಟೆಯಲ್ಲಿ ಕರಡಿ ಕುಣಿತ–ಪ್ರಾತಿನಿಧಿಕ ಚಿತ್ರ</p></div>

ಷೇರುಪೇಟೆಯಲ್ಲಿ ಕರಡಿ ಕುಣಿತ–ಪ್ರಾತಿನಿಧಿಕ ಚಿತ್ರ

   

ಮುಂಬೈ: ಸತತ ಮೂರನೇ ದಿನವಾದ ಶುಕ್ರವಾರವೂ ದೇಶದ ಷೇರುಪೇಟೆಯಲ್ಲಿ ಕರಡಿ ಕುಣಿತ ಮುಂದುವರಿದಿದ್ದು, ಷೇರು ಸೂಚ್ಯಂಕಗಳು ಇಳಿಕೆ ಕಂಡಿವೆ.

ರೆಪೊ ದರ ಕಡಿತವು ಹೂಡಿಕೆದಾರರಲ್ಲಿ ಭರವಸೆ ಮೂಡಿಸಿಲ್ಲ. ಹಾಗಾಗಿ, ನಕಾರಾತ್ಮಕ ವಹಿವಾಟು ನಡೆದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. 

ADVERTISEMENT

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 197 ಅಂಶ ಇಳಿಕೆ ಕಂಡು, 77,860 ಅಂಶಗಳಲ್ಲಿ ಮುಕ್ತಾಯಗೊಂಡಿತು. ವಹಿವಾಟಿನ ಒಂದು ಹಂತದಲ್ಲಿ 582 ಅಂಶ ಇಳಿಕೆಯಾಗಿತ್ತು.‌

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 43 ಅಂಶ ಇಳಿಕೆಯಾಗಿ, 23,559 ಅಂಶಗಳಲ್ಲಿ ಸ್ಥಿರಗೊಂಡಿತು.

ಐಟಿಸಿ ಷೇರಿನ ಮೌಲ್ಯದಲ್ಲಿ ಶೇ 2ರಷ್ಟು ಇಳಿಕೆಯಾಗಿದೆ. ಎಸ್‌ಬಿಐ, ಅದಾನಿ ಪೋರ್ಟ್ಸ್‌, ಟಿಸಿಎಸ್‌, ಐಸಿಐಸಿಐ ಬ್ಯಾಂಕ್‌, ರಿಲಯನ್ಸ್‌ ಇಂಡಸ್ಟ್ರೀಸ್‌, ‍ಪವರ್‌ ಗ್ರಿಡ್‌ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ.

ಟಾಟಾ ಸ್ಟೀಲ್‌ನ ಷೇರಿನ ಮೌಲ್ಯದಲ್ಲಿ ಶೇ 4ರಷ್ಟು ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.