ADVERTISEMENT

ಮೂರು ದಿನಗಳ ಏರಿಕೆಗೆ ತಡೆ

ಪಿಟಿಐ
Published 31 ಮೇ 2022, 16:10 IST
Last Updated 31 ಮೇ 2022, 16:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮೂರು ದಿನಗಳಿಂದ ಏರಿಕೆಯ ಹಾದಿಯಲ್ಲಿ ಇದ್ದ ಷೇರುಪೇಟೆ ಸೂಚ್ಯಂಕಗಳು ಮಂಗಳವಾರ ಇಳಿಕೆ ದಾಖಲಿಸಿದವು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 359 ಅಂಶ, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 76 ಅಂಶ ಇಳಿಕೆ ಕಂಡಿತು.

ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದರ ಮೇಲೆ ಭಾಗಶಃ ನಿಷೇಧ ವಿಧಿಸಲು ಐರೋಪ್ಯ ಒಕ್ಕೂಟ ಒಪ್ಪಿದ ನಂತರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ 120 ಡಾಲರ್‌ ಗಡಿ ದಾಟಿತು. ಇದು ಕೂಡ ಮಾರುಕಟ್ಟೆಯ ಮೇಲೆ ಪ್ರಭಾವ ಬೀರಿತು.

ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇಕಡ 1.64ರಷ್ಟು ಜಾಸ್ತಿಯಾಗಿ ಪ್ರತಿ ಬ್ಯಾರೆಲ್‌ಗೆ 123.66 ಡಾಲರ್‌ಗೆ ಏರಿಕೆ ಕಂಡಿದೆ.

ADVERTISEMENT

‘ಜಿಡಿಪಿ ಅಂಕಿ–ಅಂಶ ಏನಿರುತ್ತದೆ ಎಂಬುದರ ಮೇಲೆ ಗಮನ ಇರಿಸಿದ್ದ ದೇಶಿ ಷೇರುಪೇಟೆಗಳು ಚೇತರಿಕೆಯನ್ನು ಕಾಯ್ದುಕೊಳ್ಳಲು ವಿಫಲವಾದವು. ತೈಲ ಬೆಲೆ ಹೆಚ್ಚಾಗಿದ್ದು ಜಾಗತಿಕ ಮಾರುಕಟ್ಟೆಯಲ್ಲಿ ಹಣದುಬ್ಬರ ನಿಯಂತ್ರಿಸಲು ಅಡ್ಡಿಯಾಗಲಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.