ADVERTISEMENT

ಸತತ ಮೂರನೇ ದಿನವೂ ಗಳಿಕೆ: ಬ್ಯಾಂಕ್‌, ಐಟಿ ವಲಯ ಚೇತರಿಕೆ

ಪಿಟಿಐ
Published 29 ಏಪ್ರಿಲ್ 2020, 22:57 IST
Last Updated 29 ಏಪ್ರಿಲ್ 2020, 22:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಮೂರನೇ ದಿನವೂ ಸೂಚ್ಯಂಕಗಳು ಏರಿಕೆ ದಾಖಲಿಸಿವೆ.

ಹಣಕಾಸು, ಬ್ಯಾಂಕ್‌ ಮತ್ತು ಐಟಿ ವಲಯದ ಷೇರುಗಳು ಉತ್ತಮ ಗಳಿಕೆ ಕಂಡಿವೆ.

ಡಾಲರ್‌ ಎದುರು ರೂಪಾಯಿ ಮೌಲ್ಯ ಗಳಿಕೆ ಹಾಗೂ ಸರ್ಕಾರಿ ಸಾಲಪತ್ರಗಳ ಏಪ್ರಿಲ್‌ ತಿಂಗಳ ವಾಯಿದಾ ವಹಿವಾಟು ಗುರುವಾರ ಮುಕ್ತಾಯವಾಗಲಿದೆ. ಇದೂ ಸಹ ಸಕಾರಾತ್ಮಕ ವಹಿವಾಟಿಗೆ ಕಾರಣವಾಯಿತು. ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 606 ಅಂಶ ಹೆಚ್ಚಾಗಿ 32,720 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ADVERTISEMENT

ರೂಪಾಯಿ ಹೆಚ್ಚಳ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 52 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 75.66ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.