ರೂಪಾಯಿ
ನವದೆಹಲಿ: ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳ ಏರಿಕೆಯಿಂದ ಪ್ರಮುಖ 10 ಕಂಪನಿಗಳ ಪೈಕಿ 7 ಕಂಪನಿಗಳ ಮಾರುಕಟ್ಟೆ ಮೌಲ್ಯಕ್ಕೆ (ಎಂ–ಕ್ಯಾಪ್) ₹1.83 ಲಕ್ಷ ಕೋಟಿ ಸೇರ್ಪಡೆಯಾಗಿದೆ.
ಹಿಂದುಸ್ತಾನ್ ಯೂನಿಲಿವರ್ ಮಾರುಕಟ್ಟೆ ಮೌಲ್ಯಕ್ಕೆ ₹32,471 ಕೋಟಿ ಸೇರ್ಪಡೆಯಾಗಿದೆ. ಕಂಪನಿಯ ಒಟ್ಟು ಎಂ–ಕ್ಯಾಪ್ ₹5.89 ಲಕ್ಷ ಕೋಟಿಯಾಗಿದೆ.
ಐಸಿಐಸಿಐ ಬ್ಯಾಂಕ್ ₹32,302 ಕೋಟಿ, ಎಚ್‌ಡಿಎಫ್‌ಸಿ ಬ್ಯಾಂಕ್ ₹30,822 ಕೋಟಿ, ಐಟಿಸಿ ₹26,212 ಕೋಟಿ, ರಿಲಯನ್ಸ್ ಇಂಡಸ್ಟ್ರೀಸ್ ₹25,373 ಕೋಟಿ, ಎಸ್‌ಬಿಐ ₹19,411 ಕೋಟಿ, ಎಲ್‌ಐಸಿಯ ಮಾರುಕಟ್ಟೆ ಮೌಲ್ಯಕ್ಕೆ ₹16,729 ಕೋಟಿ ಸೇರ್ಪಡೆಯಾಗಿದೆ.
ಟಿಸಿಎಸ್ ₹28,058 ಕೋಟಿ, ಭಾರ್ತಿ ಏರ್‌ಟೆಲ್ ₹11,211 ಕೋಟಿ ಮತ್ತು ಇನ್ಫೊಸಿಸ್ ಮಾರುಕಟ್ಟೆ ಮೌಲ್ಯದಲ್ಲಿ ₹9,653 ಕೋಟಿ ಇಳಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.