ನವದೆಹಲಿ: ದೇಶದ ಷೇರುಪೇಟೆಯಲ್ಲಿ ನೋಂದಾಯಿತ ಪ್ರಮುಖ 10 ಕಂಪನಿಗಳು ಕಳೆದ ವಾರದ ವಹಿವಾಟಿನಲ್ಲಿ ₹ 2.48 ಲಕ್ಷ ಕೋಟಿ ನಷ್ಟ ಅನುಭವಿಸಿವೆ. ಇದರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯ ನಷ್ಟವೇ ₹ 1.30 ಲಕ್ಷ ಕೋಟಿ ಇದೆ. ಇದರಿಂದ ಕಂಪನಿಯ ಒಟ್ಟಾರೆ ಬಂಡವಾಳ ಮೌಲ್ಯ ₹ 16.42 ಲಕ್ಷ ಕೋಟಿಗೆ ಇಳಿಕೆ ಆಗಿದೆ.
ಅತ್ಯಂತ ಮೌಲ್ಯಯುತ 10 ಕಂಪನಿಗಳ ಸಾಲಿನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮೊದಲ ಸ್ಥಾನದಲ್ಲಿದೆ. ಟಿಸಿಎಸ್ (₹ 12.48 ಲಕ್ಷ ಕೋಟಿ) ಮತ್ತು ಎಚ್‌ಡಿಎಫ್‌ಸಿ ಬ್ಯಾಂಕ್ (₹ 7.16 ಲಕ್ಷ ಕೋಟಿ) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.