ADVERTISEMENT

ಸೋಮವಾರದ ವಹಿವಾಟಿನಲ್ಲಿ ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2020, 9:18 IST
Last Updated 10 ನವೆಂಬರ್ 2020, 9:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮುಂಬೈ ಷೇರುಪೇಟೆಯು ಸೋಮವಾರದ ವಹಿವಾಟಿನಲ್ಲಿ ಸಾರ್ವಕಾಲಿಕ ದಾಖಲೆಯ ಮಟ್ಟ ತಲುಪಿದೆ. ದಿನದ ಅಂತ್ಯಕ್ಕೆ ಸೆನ್ಸೆಕ್ಸ್, 42,597 ಅಂಶಗಳಲ್ಲಿ ಕೊನೆಗೊಂಡಿದೆ.

ಸೋಮವಾರದ ವಹಿವಾಟಿನ ಕೊನೆಯಲ್ಲಿ ಹೂಡಿಕೆದಾರರ ಸಂಪತ್ತು ₹ 2 ಲಕ್ಷ ಕೋಟಿಗಳಷ್ಟು ಹೆಚ್ಚಳವಾಗಿದೆ. ಅಮೆರಿಕದ ಅಧ್ಯಕ್ಷರಾಗಿ ಜೋ ಬೈಡನ್ ಅವರು ಚುನಾಯಿತರಾಗಿರುವುದು ಮಾರುಕಟ್ಟೆಯಲ್ಲಿ ಉತ್ಸಾಹದ ವಹಿವಾಟು ನಡೆಯಲು ಮುಖ್ಯ ಕಾರಣ ಎಂದು ತಜ್ಞರು ಹೇಳಿದ್ದಾರೆ.

ಭಾರತದ ಷೇರು ಮಾರುಕಟ್ಟೆ ಮಾತ್ರವಲ್ಲದೆ ಏಷ್ಯಾದ ಇತರ ಷೇರು ಮಾರುಕಟ್ಟೆಗಳಲ್ಲೂ ಸೋಮವಾರ ಸಕಾರಾತ್ಮಕ ವಹಿವಾಟು ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.