ADVERTISEMENT

ಸಕಾರಾತ್ಮಕ ವಹಿವಾಟಿನ ವಾರ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2019, 19:45 IST
Last Updated 14 ಡಿಸೆಂಬರ್ 2019, 19:45 IST
sensex
sensex   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ವಾರದ ವಹಿವಾಟು ಸಕಾರಾತ್ಮಕ ಅಂತ್ಯಕಂಡಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 565 ಅಂಶ ಏರಿಕೆ ಕಂಡು 41,009 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಐದು ದಿನಗಳಲ್ಲಿ ಒಂದು ದಿನ ಮಾತ್ರವೇ (ಮಂಗಳವಾರ) ಸೂಚ್ಯಂಕ ಇಳಿಕೆ ಕಂಡಿತ್ತು.

ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ, ಹೂಡಿಕೆದಾರರ ಸಂಪತ್ತು ಮೌಲ್ಯವು ₹ 1.32 ಲಕ್ಷ ಕೋಟಿಗಳಿಷ್ಟು ಏರಿಕೆಯಾಗಿದೆ. ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 151.21 ಲಕ್ಷ ಕೋಟಿಗಳಿಂದ ₹ 153.53 ಲಕ್ಷ ಕೋಟಿಗಳಿಗೆ ಏರಿಕೆ ಕಂಡಿದೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 165 ಅಂಶ ಹೆಚ್ಚಾಗಿ 12,086 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಅಮೆರಿಕ–ಚೀನಾ ವಾಣಿಜ್ಯ ಬಿಕ್ಕಟ್ಟು ಅಂತ್ಯಗೊಳ್ಳುವ ನಿರೀಕ್ಷೆ,ವಿದೇಶಿ ಬಂಡವಾಳ ಒಳಹರಿವು ಸಕಾರಾತ್ಮಕ ವಹಿವಾಟಿಗೆ ಕಾರಣಗಳಾಗಿವೆ.

ಹೂಡಿಕೆ

ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಡಿಸೆಂಬರ್‌ ತಿಂಗಳ ಮೊದಲ ವಾರದಲ್ಲಿ ಬಂಡವಾಳ ಮಾರುಕಟ್ಟೆಯಿಂದ ₹ 244 ಕೋಟಿ ಹಿಂದಕ್ಕೆ ಪಡೆದಿದ್ದಾರೆ. ಎರಡನೇ ವಾರದಲ್ಲಿ₹ 4,77 ಕೋಟಿಗೂ ಅಧಿಕ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.

ಮಂದಗತಿಯ ಆರ್ಥಿಕ ಬೆಳವಣಿಗೆಯಿಂದಾಗಿ ಖರೀದಿ ಮತ್ತು ಮಾರಾಟ ಚಟುವಟಿಕೆಗಳೆರಡೂ ನಡೆಯುತ್ತಿವೆ.

ಹಣಕಾಸು ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆಯು ಶೇ 4.5ಕ್ಕೆ ಕುಸಿದಿದೆ. ಇದರಿಂದಾಗಿ ಬಂಡವಾಳ ಹೂಡಿಕೆ ಕಡಿಮೆಯಾಗುತ್ತಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.