
ಮುಂಬೈ: ಕಳೆದ ಕೆಲ ದಿನಗಳಿಂದ ಏರಿಕೆಯತ್ತ ಮುಖ ಮಾಡಿದ್ದ ಭಾರತೀಯ ಷೇರುಪೇಟೆ ಇಂದು ಕುಸಿತ ದಾಖಲಿಸಿದೆ. ಸೆನ್ಸೆಕ್ಸ್ 592.67 ಅಂಶ ಕುಸಿದರೆ, ನಿಫ್ಟಿ 25,877.85ರ ಹಂತಕ್ಕೆ ಕುಸಿಯಿತು.
ಅಮೆರಿಕದ ಫೆಡರಲ್ ಬ್ಯಾಂಕ್‌ನ ದರ ಪರಿಷ್ಕರಣೆ ಕುರಿತಾದ ಅನಿಶ್ಚಿತತೆ ನಡುವೆ ವಿದೇಶಿ ಬಂಡವಾಳದ ಹೊರಹರಿವು ಕುಸಿತಕ್ಕೆ ಕಾರಣವಾಗಿದೆ ಎಂದು ವರದಿ ತಿಳಿಸಿದೆ.
30 ಷೇರುಗಳ ಬಿಎಸ್‌ಇ ಸೆನ್ಸೆಕ್ಸ್ 592.67 ಅಂಶ ಕುಸಿದು 84,404ರಲ್ಲಿ ವಹಿವಾಟು ಅಂತ್ಯಗೊಳಿಸಿದರೆ, ದಿನದ ವಹಿವಾಟಿನಲ್ಲಿ 684.48 ಅಂಶಗಳಷ್ಟು ಕುಸಿದಿತ್ತು.
50 ಷೇರುಗಳ ಎನ್‌ಎಸ್‌ಇ ನಿಫ್ಟಿ 176.05 ಅಂಶಗಳಷ್ಟು ಕುಸಿದು 25,877.85ರಲ್ಲಿ ವಹಿವಾಟು ಅಂತ್ಯಗೊಳಿಸಿತು.
ಸೆನ್ಸೆಕ್ಸ್ ಕಂಪನಿಗಳ ಪೈಕಿ ಭಾರ್ತಿ ಏರ್‌ಟೆಲ್, ಪವರ್ ಗ್ರಿಡ್, ಟೆಕ್ ಮಹೀಂದ್ರ, ಇನ್ಫೋಸಿಸ್, ಬಜಾಜ್ ಫೈನಾನ್ಸ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಪ್ರಮುಖವಾಗಿ ನಷ್ಟ ಕಂಡಿವೆ.
ಲಾರ್ಸೆನ್ ಅಂಡ್ ಟೊಬ್ರೊ, ಭಾರತ್ ಎಲೆಕ್ಟ್ರಾನಿಕ್ಸ್, ಅಲ್ಟ್ರಾಟೆಕ್ ಸಿಮೆಂಟ್ ಮತ್ತು ಮಾರುತಿ ಲಾಭ ಗಳಿಸಿವೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬುಧವಾರ ₹2,540.16 ಕೋಟಿ ಮೌಲ್ಯದ ಷೇರುಗಳ ಮಾರಾಟ ಮಾಡಿದ್ದಾರೆ. ದೇಶೀಯ ಸಾಂಸ್ಥಿಕ ಹೂಡಿಕೆದಾರರು ₹5,692.81 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.
ಏಷ್ಯಾ ಮಾರುಕಟ್ಟೆಗಳ ಪೈಕಿ ಶಾಂಘೈನ ಎಸ್‌ಎಸ್‌ಇ ಕಾಂಪೋಸಿಟ್ ಸೂಚ್ಯಂಕ ಮತ್ತು ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ ಸೂಚ್ಯಂಕವು ಇಳಿಕೆ ಕಂಡರೆ, ದಕ್ಷಿಣ ಕೊರಿಯಾದ ಕಾಸ್ಪಿ ಮತ್ತು ಜಪಾನ್‌ನ ನಿಕ್ಕಿ 225 ಸೂಚ್ಯಂಕವು ಏರಿಕೆಯಲ್ಲಿ ಕೊನೆಗೊಂಡಿತು.
ಯೂರೋಪ್ ಮಾರುಕಟ್ಟೆಗಳು ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿದರೆ, ಅಮೆರಿಕ ಪೇಟೆಯು ಬುಧವಾರ ಮಿಶ್ರಪ್ರತಿಕ್ರಿಯೆ ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.