ADVERTISEMENT

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: 84 ಸಾವಿರ ದಾಟಿದ ಸೆನ್ಸೆಕ್ಸ್‌

ಪಿಟಿಐ
Published 9 ಫೆಬ್ರುವರಿ 2026, 15:56 IST
Last Updated 9 ಫೆಬ್ರುವರಿ 2026, 15:56 IST
ಸೆನ್ಸೆಕ್ಸ್‌
ಸೆನ್ಸೆಕ್ಸ್‌   

ಮುಂಬೈ: ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವು, ವಿವಿಧ ವಲಯಗಳ ಕಂಪನಿಗಳ ಷೇರು ಖರೀದಿಯನ್ನು ಹೆಚ್ಚಿಸಿದೆ. ಇದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಏರಿಕೆ ಕಂಡಿದ್ದು, ಸೆನ್ಸೆಕ್ಸ್‌ ಮತ್ತೆ 84 ಸಾವಿರದ ಗಡಿ ದಾಟಿದೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 485 ಅಂಶ ಏರಿಕೆಯಾಗಿ, 84,065ಕ್ಕೆ ವಹಿವಾಟು ಅಂತ್ಯಗೊಂಡಿದೆ. ವಹಿವಾಟಿನ ವೇಳೆ ಸೆನ್ಸೆಕ್ಸ್ 734 ಅಂಶದವರೆಗೆ ಜಿಗಿತ ಕಂಡಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 173 ಅಂಶ ಹೆಚ್ಚಳವಾಗಿ, 25,867ಕ್ಕೆ ಕೊನೆಗೊಂಡಿತು.

‘ಭಾರತ ಮತ್ತು ಅಮೆರಿಕದ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವು ಸುಂಕದ ಅನಿಶ್ಚಿತತೆಯನ್ನು ಕಡಿಮೆ ಮಾಡಿದೆ. ಜೊತೆಗೆ, ವಿದೇಶಿ ಹೂಡಿಕೆದಾರರು ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲು ಮುಂದಾಗಿದ್ದಾರೆ. ಇದು ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ಕಾರಣವಾಗಿವೆ’ ಎಂದು ಜಿಯೋಜಿತ್ ಇನ್ವೆಸ್ಟ್‌ಮೆಂಟ್ಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರವು ಶೇ 0.81ರಷ್ಟು ಇಳಿಕೆ ಆಗಿದೆ. ಪ್ರತೀ ಬ್ಯಾರಲ್ ದರವು 67.52 ಡಾಲರ್ ಆಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.