
ಪಿಟಿಐ
ಮುಂಬೈ: ದೇಶದ ಷೇರುಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಸೂಚ್ಯಂಕಗಳು ಇಳಿಕೆ ಕಂಡಿವೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಸುಂಕ ನೀತಿಗೆ ಅಲ್ಲಿನ ಅಂತರರಾಷ್ಟ್ರೀಯ ವ್ಯಾಪಾರ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಇದರಿಂದ ವ್ಯಾಪಾರ ಅನಿಶ್ಚಿತ ಸ್ಥಿತಿ ಸೃಷ್ಟಿಯಾಗಿದೆ. ಹಾಗಾಗಿ, ಜಾಗತಿಕ ಷೇರು ಮಾರುಕಟ್ಟೆಗಳು ಕುಸಿತ ಕಂಡಿವೆ. ದೇಶೀಯ ಮಾರುಕಟ್ಟೆಯೂ ಇದೇ ಹಾದಿಯಲ್ಲಿ ಸಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 182 ಅಂಶ ಇಳಿಕೆ ಕಂಡು, 81,451 ಅಂಶಗಳಲ್ಲಿ ಮುಕ್ತಾಯಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 82 ಅಂಶ ಇಳಿಕೆಯಾಗಿದ್ದು, 24,750 ಅಂಶಗಳಲ್ಲಿ ಸ್ಥಿರಗೊಂಡಿತು.
ಲೋಹ, ಐ.ಟಿ ಮತ್ತು ಆಟೊ ವಲಯದ ಷೇರುಗಳ ಮೌಲ್ಯ ಇಳಿಕೆಯಾಗಿದ್ದರೆ, ಬ್ಯಾಂಕಿಂಗ್ ಷೇರುಗಳ ಮೌಲ್ಯ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.