ADVERTISEMENT

ಸೆನ್ಸೆಕ್ಸ್ 304 ಅಂಶ ಕುಸಿತ

ಪಿಟಿಐ
Published 23 ಮಾರ್ಚ್ 2022, 13:01 IST
Last Updated 23 ಮಾರ್ಚ್ 2022, 13:01 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಆರಂಭದಲ್ಲಿ ಚೇತರಿಕೆಯ ಹಾದಿಯಲ್ಲಿದ್ದ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರದ ವಹಿವಾಟಿನ ಕೊನೆಯಲ್ಲಿ 304 ಅಂಶ ಕುಸಿತದೊಂದಿಗೆ ವಹಿವಾಟು ಅಂತ್ಯಗೊಳಿಸಿತು. ರಾಷ್ಟ್ರೀಯ ಷೇರು‍ಪೇಟೆ ಸೂಚ್ಯಂಕ ನಿಫ್ಟಿ 69 ಅಂಶ ಕುಸಿಯಿತು.

ಬ್ಯಾಂಕಿಂಗ್, ಹಣಕಾಸು ಮತ್ತು ಕೆಲವು ಐ.ಟಿ. ಕಂಪನಿಗಳ ಷೇರುಗಳನ್ನು ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಮಾರಾಟ ಮಾಡಿದ್ದು ಸೂಚ್ಯಂಕಗಳ ಇಳಿಕೆಗೆ ಕಾರಣವಾಯಿತು ಎಂದು ವರ್ತಕರು ತಿಳಿಸಿದ್ದಾರೆ.

‘ಈಚೆಗೆ ಕಂಡುಬಂದ ಗಳಿಕೆಯ ಓಟದ ನಂತರದಲ್ಲಿ ಮಾರುಕಟ್ಟೆಯಲ್ಲಿ ಎಚ್ಚರಿಕೆಯ ವಹಿವಾಟು ನಡೆಯುತ್ತಿದೆ. ಹಣದುಬ್ಬರದ ಒತ್ತಡ ಹೆಚ್ಚಾಗುತ್ತಿರುವ ಕಾರಣದಿಂದಾಗಿ ಮಾರುಕಟ್ಟೆಯಲ್ಲಿ ಅಸ್ಥಿರತೆ ಮನೆ ಮಾಡಿದೆ. ಕಚ್ಚಾ ವಸ್ತುಗಳ ಬೆಲೆ ಹೆಚ್ಚಾಗುತ್ತಿರುವುದು, ಜಗತ್ತಿನ ಹಲವು ಕಡೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಉತ್ಪನ್ನಗಳಿಗೆ ಬೇಡಿಕೆ ತಗ್ಗಿರುವುದು ಮತ್ತು ಯುದ್ಧದ ವಾತಾವರಣವು ಕಂಪನಿಗಳ ವರಮಾನದ ಮೆಲೆ ನಕಾರಾತ್ಮಕ ಪರಿಣಾಮ ಉಂಟುಮಾಡಬಹುದು’ ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ ಶೇಕಡ 2.12ರಷ್ಟು ಹೆಚ್ಚಾಗಿದ್ದು 117.8 ಡಾಲರ್‌ಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.