ಷೇರುಪೇಟೆ
ಮುಂಬೈ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಆಡಳಿತವು ಎಚ್–1ಬಿ ವೀಸಾ ಅರ್ಜಿಗೆ ಸಂಬಂಧಿಸಿದ ವಾರ್ಷಿಕ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (ಅಂದಾಜು ₹88 ಲಕ್ಷ) ಹೆಚ್ಚಿಸಿದ ಪರಿಣಾಮ ಸೋಮವಾರ ಆರಂಭಿಕ ವಹಿವಾಟಿನಲ್ಲಿ ದೇಶೀಯ ಷೇರು ಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಕುಸಿತ ಕಂಡಿವೆ.
ಇಂದಿನ ಆರಂಭಿಕ ವಹಿವಾಟಿನಲ್ಲಿ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 475 ಅಂಶ ಕುಸಿದು, 82,151ಕ್ಕೆ ತಲುಪಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 88 ಅಂಶ ಕುಸಿದು 25,238ಕ್ಕೆ ತಲುಪಿದೆ.
ಸೆನ್ಸೆಕ್ಸ್ ಸಂಸ್ಥೆಗಳಾದ ಟೆಕ್ ಮಹೀಂದ್ರಾ, ಇನ್ಫೊಸಿಸ್, ಎಚ್‌ಸಿಎಲ್ ಟೆಕ್ ಮತ್ತು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಶೇಕಡ 3.88ರಿಂದ 2.26ರಷ್ಟು ಕುಸಿತ ಕಂಡಿವೆ. ಸನ್ ಫಾರ್ಮಾ, ಭಾರತ್ ಎಲೆಕ್ಟ್ರಾನಿಕ್ಸ್, ಎಕ್ಸಿಸ್ ಬ್ಯಾಂಕ್ ಮತ್ತು ಟಾಟಾ ಸ್ಟೀಲ್ ಕೂಡ ನಷ್ಟ ಕಂಡಿವೆ.
ಅದಾನಿ ಪೋರ್ಟ್ಸ್, ಎಟರ್ನಲ್, ಟ್ರೆಂಟ್ ಮತ್ತು ಬಜಾಜ್ ಫೈನಾನ್ಸ್ ಲಾಭ ಗಳಿಸಿವೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.66ರಷ್ಟು ಏರಿಕೆಯಾಗಿದೆ. ಪ್ರತೀ ಬ್ಯಾರೆಲ್ ದರವು 67.12 ಡಾಲರ್ ಆಗಿದೆ.
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 5 ಪೈಸೆ ಇಳಿಕೆಯಾಗಿದೆ. ರೂಪಾಯಿ ಮೌಲ್ಯವು ಡಾಲರ್ ಎದುರು ₹88.21ರಷ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.