ADVERTISEMENT

ಸೂಚ್ಯಂಕ 346 ಅಂಶ ಇಳಿಕೆ

ತೈಲ ದರ ಏರಿಕೆ, ರೂಪಾಯಿ ಮೌಲ್ಯ ಇಳಿಕೆ ಪರಿಣಾಮ

ಪಿಟಿಐ
Published 12 ನವೆಂಬರ್ 2018, 17:06 IST
Last Updated 12 ನವೆಂಬರ್ 2018, 17:06 IST

ಮುಂಬೈ: ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ ಕುಸಿತದ ಪರಿಣಾಮದಿಂದಾಗಿವಾರದ ವಹಿವಾಟಿನ ಮೊದಲ ದಿನವೇ ಸೂಚ್ಯಂಕಗಳು ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆಯಲ್ಲಿ (ಬಿಎಸ್‌ಇ) ಅತಿಯಾದ ಖರೀದಿ ಮತ್ತು ಮಾರಾಟದ ಒತ್ತಡಕ್ಕೆ ಒಳಗಾಗಿ ಸಂವೇದಿ ಸೂಚ್ಯಂಕ346 ಅಂಶ ಇಳಿಕೆ ಕಂಡಿತು. 34,812 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 103 ಅಂಶ ಇಳಿಕೆ ಕಂಡು 10,482 ಅಂಶಗಳಲ್ಲಿ ವಹಿವಾಟು ಅಂತ್ಯಕಂಡಿದೆ. ವಾಹನ ಮತ್ತು ಇಂಧನ ವಲಯದ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾದವು.

ADVERTISEMENT

ಶುಕ್ರವಾರ ವಿದೇಶಿ ಹೂಡಿಕೆದಾರರು ₹ 614 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರು. ದೇಶಿ ಸಾಂಸ್ಥಿಕ ಹೂಡಿಕೆದಾರರು₹ 337 ಕೋಟಿ ಮೌಲ್ಯದ ಷೇರುಗಳನ್ನು ಮಾರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.