ಮುಂಬೈ: ಮಂದಗತಿಯ ಆರ್ಥಿಕತೆ ಮತ್ತು ಕೋವಿಡ್ ವೈರಸ್ ಪ್ರಭಾವದಿಂದಾಗಿ ಸತತ ಮೂರನೇ ದಿನವೂ ಸೂಚ್ಯಂಕಗಳು ಇಳಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 202 ಅಂಶ ಇಳಿಕೆಯಾಗಿ 41,055 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಪ್ಟಿ 68 ಅಂಶ ಕಡಿಮೆಯಾಗಿ 12,045 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಒಎನ್‌ಜಿಸಿ ಷೇರು ಶೇ 3.20ರಷ್ಟು ಗರಿಷ್ಠ ನಷ್ಟ ಕಂಡಿದೆ. ಡಿಸೆಂಬರ್ ತ್ರೈಮಾಸಿಕದಲ್ಲಿ ನಿವ್ವಳ ಲಾಭ ಇಳಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.