ADVERTISEMENT

ಷೇರುಪೇಟೆ ವಹಿವಾಟು 6 ತಿಂಗಳ ಗರಿಷ್ಠ

ಪಿಟಿಐ
Published 19 ಮಾರ್ಚ್ 2019, 18:18 IST
Last Updated 19 ಮಾರ್ಚ್ 2019, 18:18 IST
   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ 7ನೇ ವಹಿವಾಟು ಅವಧಿಯಲ್ಲಿಯೂ ಸೂಚ್ಯಂಕಗಳು ಏರಿಕೆ ದಾಖಲಿಸಿವೆ.

ಐಟಿಸಿ, ರಿಲಯನ್ಸ್‌ ಇಂಡಸ್ಟ್ರೀಸ್‌ ಮತ್ತು ಇನ್ಫೊಸಿಸ್‌ ಕಂಪನಿಗಳ ಷೇರುಗಳ ಗಳಿಕೆ ಮತ್ತು ವಿದೇಶಿ ಬಂಡವಾಳ ಒಳಹರಿವು ಸಕಾರಾತ್ಮಕ ಚಲನೆ ಮುಂದುವರಿಯುವಂತೆ ಮಾಡಿವೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 268 ಅಂಶ ಹೆಚ್ಚಾಗಿ ಆರು ತಿಂಗಳ ಗರಿಷ್ಠ ಮಟ್ಟವಾದ 38,363 ಅಂಶಗಳಲ್ಲಿ ವಹಿವಾಟು ಅಂತ್ಯವಾಯಿತು.

ADVERTISEMENT

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 70 ಅಂಶ ಹೆಚ್ಚಾಗಿ ಆರು ತಿಂಗಳ ಗರಿಷ್ಠ ಮಟ್ಟವಾದ 11,532 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.

ಕೇಂದ್ರದಲ್ಲಿನ ಆಡಳಿತಾರೂಢ ಸರ್ಕಾರವೇ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿರೀಕ್ಷೆಯಿಂದಚಿಲ್ಲರೆ ಹೂಡಿಕೆದಾರರ ಭಾಗವಹಿಸುವಿಕೆ ಮತ್ತು ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಹೆಚ್ಚಾಗುತ್ತಿದೆ. ಇದು ಷೇರುಪೇಟೆ ಚಟುವಟಿಕೆಯನ್ನು ಉತ್ತೇಜಿಸುತ್ತಿದೆ ಎಂದು ತಜ್ಞರು ಹೇಳಿದ್ದಾರೆ.

ರಿಯಲ್ ಎಸ್ಟೇಟ್‌ ವಲಯದ ಮೇಲಿನ ಜಿಎಸ್‌ಟಿ ಬದಲಾಯಿಸಲು ಜಿಎಸ್‌ಟಿ ಮಂಡಳಿ ಒಪ್ಪಿಗೆ ನೀಡಿದೆ. ಇದು ಸಹ ಸಕಾರಾತ್ಮಕ ಚಲನೆಗೆ ನೆರವಾಯಿತು ಎಂದೂ ಹೇಳಿದ್ದಾರೆ.

ಆರ್‌ಕಾಂ ಷೇರುಗಳಿಕೆ

ಎರಿಕ್ಸನ್‌ಗೆ ₹462 ಕೋಟಿ ಬಾಕಿ ಪಾವತಿಸಿರುವುದರಿಂದ ರಿಲಯನ್ಸ್‌ ಕಮ್ಯುನಿಕೇಷನ್‌ನ ಷೇರುಗಳು ಮಂಗಳವಾರ ಶೇ 10ರವರೆಗೂ ಏರಿಕೆ ದಾಖಲಿಸಿದವು.

ಕಂಪನಿಯ ಮಾರುಕಟ್ಟೆ ಬಂಡವಾಳ ಮೌಲ್ಯ ₹ 111 ಕೋಟಿಗಳಷ್ಟು ಹೆಚ್ಚಾಗಿ ₹ 1,217 ಕೋಟಿಗಳಿಗೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.