ADVERTISEMENT

36 ಸಾವಿರ ಗಡಿ ದಾಟಿದ ಸೂಚ್ಯಂಕ

ಪಿಟಿಐ
Published 17 ಡಿಸೆಂಬರ್ 2018, 20:00 IST
Last Updated 17 ಡಿಸೆಂಬರ್ 2018, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ಸೋಮವಾರದ ವಹಿವಾಟಿನಲ್ಲಿ 36 ಸಾವಿರದ ಗಡಿ ದಾಟಿತು.

ರೂಪಾಯಿ ಮೌಲ್ಯ ವೃದ್ಧಿ, ತಗ್ಗಿದ ವ್ಯಾಪಾರ ಕೊರತೆ ಅಂತರ ಹಾಗೂ ವಿದೇಶಿ ಬಂಡವಾಳ ಒಳಹರಿವಿನಿಂದಾಗಿ ಸತತ ಐದನೇ ವಹಿವಾಟು ಅವಧಿಯಲ್ಲಿಯೂ ಸಕಾರಾತ್ಮಕ ವಹಿವಾಟು ಮುಂದುವರೆದಿದೆ. ಬಿಎಸ್‌ಇ 308 ಅಂಶ ಜಿಗಿತ ಕಂಡು 36,312 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 82 ಅಂಶ ಏರಿಕೆಯಾಗಿ 10,888 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ADVERTISEMENT

ರೂಪಾಯಿ ಮೌಲ್ಯ ವೃದ್ಧಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 34 ಪೈಸೆ ಹೆಚ್ಚಾಗಿದೆ. ಇದರಿಂದ ಒಂದು ಡಾಲರ್‌ಗೆ ₹ 71.56ಕ್ಕೆ ತಲುಪಿತು.

ದೇಶಿ ಷೇರುಪೇಟೆಯಲ್ಲಿನ ಸಕಾರಾತ್ಮಕ ವಹಿವಾಟು ಹಾಗೂ ವ್ಯಾಪಾರ ಕೊರತೆ ಅಂತರ ತಗ್ಗಿರುವುದು ರೂಪಾಯಿ ಮೌಲ್ಯ ವೃದ್ಧಿಗೆ ನೆರವಾಯಿತು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.