ADVERTISEMENT

ಪೇಟೆಯಲ್ಲಿ ಮುಂದುವರಿದ ನಕಾರಾತ್ಮಕ ವಹಿವಾಟು

ಪಿಟಿಐ
Published 15 ಜೂನ್ 2019, 20:00 IST
Last Updated 15 ಜೂನ್ 2019, 20:00 IST
   

ಮುಂಬೈ: ದೇಶದ ಷೇರುಪೇಟೆಗಳಲ್ಲಿ ಸತತ ಎರಡನೇ ವಾರವೂ ನಕಾರಾತ್ಮಕ ಚಟುವಟಿಕೆ ಮುಂದುವರಿದಿದೆ.

ಐದು ದಿನಗಳ ವಹಿವಾಟಿನಲ್ಲಿ ಮಾರುಕಟ್ಟೆ ಮೌಲ್ಯದ ಲೆಕ್ಕದಲ್ಲಿ ಹೂಡಿಕೆದಾರರ ಸಂಪತ್ತು ಮೌಲ್ಯ ₹ 1 ಲಕ್ಷ ಕೋಟಿಗಳಷ್ಟು ಕರಗಿದೆ.

ಇದರಿಂದ ಷೇರುಪೇಟೆಯ ಬಂಡವಾಳ ಮೌಲ್ಯ ₹ 153 ಲಕ್ಷ ಕೋಟಿಗಳಿಂದ ₹ 152 ಲಕ್ಷ ಕೋಟಿಗೆ ಇಳಿಕೆಯಾಗಿದೆ.

ADVERTISEMENT

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) ವಾರದ ವಹಿವಾಟಿನಲ್ಲಿ 164 ಅಂಶ ಇಳಿಕೆಯಾಗಿದ್ದು, 39,452 ಅಂಶಗಳಲ್ಲಿ ವಹಿವಾಟು ಅಂತ್ಯ ಗೊಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 47 ಅಂಶ ಇಳಿಕೆ ಕಂಡು 11,823 ಅಂಶಗಳಲ್ಲಿ ವಾರದ ವಹಿವಾಟು ಅಂತ್ಯಕಂಡಿದೆ.

ಅಮೆರಿಕ ಮತ್ತು ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಂಘರ್ಷ ವಹಿವಾಟಿನ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿವೆ.

ವಿದೇಶಿ ಸಾಂಸ್ಥಿಕ ಹೂಡಿಕೆ: ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಷೇರುಗಳ ಖರೀದಿಗಿಂತಲೂ ಮಾರಾಟಕ್ಕೇ ಹೆಚ್ಚು ಗಮನ ನೀಡುತ್ತಿದ್ದಾರೆ.

ಷೇರುಪೇಟೆಯಲ್ಲಿ ₹ 484 ಕೋಟಿ ಮೌಲ್ಯದ ಷೇರು ಗಳನ್ನು ಖರೀದಿಸಿದ್ದರೆ ₹ 1,289 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ರೂಪಾಯಿ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ 34 ಪೈಸೆ ಇಳಿಕೆ ಕಂಡಿದ್ದು
₹ 69.80ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.