ADVERTISEMENT

ಎರಡನೇ ದಿನವೂ ಸೆನ್ಸೆಕ್ಸ್ ಇಳಿಕೆ

​ಪ್ರಜಾವಾಣಿ ವಾರ್ತೆ
Published 17 ಮೇ 2023, 16:28 IST
Last Updated 17 ಮೇ 2023, 16:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಐ.ಟಿ. ಮತ್ತು ತಂತ್ರಜ್ಞಾನ ಷೇರುಗಳು ಮಾರಾಟದ ಒತ್ತಡಕ್ಕೆ ಒಳಗಾಗಿದ್ದರಿಂದ ದೇಶದ ಷೇರುಪೇಟೆಗಳಲ್ಲಿ ಸತತ ಎರಡನೇ ದಿನವೂ ವಹಿವಾಟು ಇಳಿಕೆ ಕಂಡಿತು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 371 ಅಂಶ ಇಳಿಕೆ ಕಂಡರೆ, ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 105 ಅಂಶ ಇಳಿಕೆ ಕಂಡಿತು.

ಜಾಗತಿಕ ಷೇರುಪೇಟೆಗಳಲ್ಲಿ ವಹಿವಾಟು ಇಳಿಕೆ ಕಂಡಿದ್ದರಿಂದ ದೇಶದಲ್ಲಿ ಹೂಡಿಕೆದಾರರು ಎಚ್ಚರಿಕೆಯಿಂದ ವಹಿವಾಟು ನಡೆಸಿದರು ಎಂದು ಜಿಯೋಜಿತ್‌ ಹಣಕಾಸು ಸೇವೆಗಳ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್ ಹೇಳಿದ್ದಾರೆ.

ADVERTISEMENT

ವಲಯವಾರು ರಿಯಾಲ್ಟಿ ಶೇ 1.29, ತಂತ್ರಜ್ಞಾನ ಶೇ 0.89, ಐ.ಟಿ. ಶೇ 0.79ರಷ್ಟು ಇಳಿಕೆ ಕಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.