ADVERTISEMENT

ಸೆನ್ಸೆಕ್ಸ್‌, ನಿಫ್ಟಿ ಏರಿಕೆ

ಪಿಟಿಐ
Published 12 ಆಗಸ್ಟ್ 2022, 14:20 IST
Last Updated 12 ಆಗಸ್ಟ್ 2022, 14:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ ಶುಕ್ರವಾರ 130 ಅಂಶ ಏರಿಕೆ ಕಂಡಿತು. ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ ಕೂಡ ಸತತ ಐದನೇ ದಿನವೂ ಗಳಿಕೆ ದಾಖಲಿಸಿತು.

ತೈಲ ಮತ್ತು ಅನಿಲ ಹಾಗೂ ವಿದ್ಯುತ್ ವಲಯದ ಷೇರುಗಳ ಮೌಲ್ಯ ಹೆಚ್ಚಳದಿಂದ ಷೇರುಪೇಟೆಗಳ ಸೂಚ್ಯಂಕಗಳು ಏರಿಕೆ ಕಂಡವು. ಸೆನ್ಸೆಕ್ಸ್‌ 59,462 ಅಂಶಗಳಲ್ಲಿ ವಹಿವಾಟು ಅಂತ್ಯಗೊಳಿಸಿದರೆ, ನಿಫ್ಟಿ 17,698 ಅಂಶಗಳಿಗೆ ತಲುಪಿತು.

‘ವಿದೇಶಿ ಸಾಂಸ್ಥಿಕ ಹೂಡಿಕೆ ಮತ್ತು ಡಾಲರ್‌ ಮೌಲ್ಯ ಇಳಿಕೆಯು ಷೇರುಪೇಟೆಗಳಲ್ಲಿ ಸಕಾರಾತ್ಮಕ ವಹಿವಾಟಿಗೆ ಕಾರಣವಾದವು’ ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್‌ ಹೇಳಿದ್ದಾರೆ.

ADVERTISEMENT

ಬ್ರೆಂಟ್‌ ಕಚ್ಚಾ ತೈಲ ದರ ಶೇ 0.40ರಷ್ಟು ಹೆಚ್ಚಾಗಿ ಒಂದು ಬ್ಯಾರಲ್‌ಗೆ 100 ಡಾಲರ್‌ಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.