ಮುಂಬೈ: ಇಸ್ರೇಲ್–ಇರಾನ್ ಸಂಘರ್ಷದಿಂದ ಹೆಚ್ಚಿದ ಜಾಗತಿಕ ಅನಿಶ್ಚಿತತೆ ಕಾರಣಕ್ಕೆ ಸತತ ಮೂರನೇ ವಹಿವಾಟಿನ ದಿನವೂ ದೇಶದ ಷೇರು ಸೂಚ್ಯಂಕಗಳು ಇಳಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ಗುರುವಾರ 82 ಅಂಶ ಇಳಿಕೆಯಾಗಿ, 81,361ಕ್ಕೆ ವಹಿವಾಟು ಕೊನೆಗೊಂಡಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 18 ಅಂಶ ಕಡಿಮೆಯಾಗಿ, 24,793ಕ್ಕೆ ಅಂತ್ಯಗೊಂಡಿದೆ.
ಅಮೆರಿಕದ ಫೆಡರಲ್ ಬ್ಯಾಂಕ್ ಬಡ್ಡಿ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿರುವುದು ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಹೀಗಾಗಿ, ದೇಶದ ಷೇರು ಸೂಚ್ಯಂಕಗಳು ಇಳಿಕೆ ಕಂಡವು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.