ADVERTISEMENT

ಷೇರುಪೇಟೆಯಲ್ಲಿ ತೇಜಿ ವಹಿವಾಟು

ಪಿಟಿಐ
Published 2 ಮೇ 2023, 18:34 IST
Last Updated 2 ಮೇ 2023, 18:34 IST
ಷೇರುಪೇಟೆ
ಷೇರುಪೇಟೆ    

ಮುಂಬೈ: ವಿದೇಶಿ ಬಂಡವಾಳದ ಒಳಹರಿವು ಹಾಗೂ ಏಪ್ರಿಲ್‌ ತಿಂಗಳಲ್ಲಿ ಜಿಎಸ್‌ಟಿ ಸಂಗ್ರಹವು ದಾಖಲೆಯ ಮಟ್ಟಕ್ಕೆ ಹೆಚ್ಚಳವಾಗಿದ್ದು ದೇಶದ ಷೇರುಪೇಟೆಗಳಲ್ಲಿ ಮಂಗಳವಾರ ತೇಜಿ ವಹಿವಾಟು ನಡೆಯಲು ನೆರವಾದವು. ಹೂಡಿಕೆದಾರರು ಇನ್ಫೊಸಿಸ್ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ನ ಷೇರುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸತತ ಎಂಟನೆಯ ದಿನವೂ ಏರಿಕೆ ಕಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ ಕೂಡ ಏರಿಕೆ ದಾಖಲಿಸಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್‌ಗೆ ಶೇಕಡ 0.38ರಷ್ಟು ಕಡಿಮೆ ಆಗಿದ್ದು 79.03 ಡಾಲರ್‌ಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT