ADVERTISEMENT

ಜಾಗತಿಕ ಷೇರುಪೇಟೆಗಳ ಪ್ರಭಾವ: ಒಂದು ವಾರದ ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯ

ಪಿಟಿಐ
Published 28 ಡಿಸೆಂಬರ್ 2021, 15:55 IST
Last Updated 28 ಡಿಸೆಂಬರ್ 2021, 15:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಐ.ಟಿ., ಔಷಧ ಮತ್ತು ಬ್ಯಾಂಕಿಂಗ್ ವಲಯಗಳ ಷೇರುಗಳ ಮೌಲ್ಯ ಹೆಚ್ಚಳದಿಂದಾಗಿ ದೇಶದ ಷೇರುಪೇಟೆಗಳು ಮಂಗಳವಾರದ ವಹಿವಾಟಿನಲ್ಲಿ ಒಂದು ವಾರದ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 477 ಅಂಶ ಏರಿಕೆ ಕಂಡು 57,897 ಅಂಂಶಗಳಲ್ಲಿ ದಿನದ ವಹಿವಾಟು ಅಂತ್ಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 147 ಅಂಶ ಹೆಚ್ಚಾಗಿ 17,233 ಅಂಶಗಳಿಗೆ ತಲುಪಿತು.

ಸೆನ್ಸೆಕ್ಸ್‌ನಲ್ಲಿ ಏಷ್ಯನ್‌ ಪೇಂಟ್ಸ್‌ ಷೇರು ಮೌಲ್ಯವು ಶೇಕಡ 3ರಷ್ಟು ಗಳಿಕೆ ಕಂಡುಕೊಂಡಿತು. ಸನ್ ಫಾರ್ಮಾ ಷೇರು ಮೌಲ್ಯ ಶೇ 2.59ರಷ್ಟು ಹೆಚ್ಚಾಗಿದೆ.

ADVERTISEMENT

ಜಾಗತಿಕ ಷೇರುಪೇಟೆಗಳಲ್ಲಿ ನಡೆಯುತ್ತಿರುವ ಸಕಾರಾತ್ಮಕ ವಹಿವಾಟು ದೇಶಿ ಷೇರುಪೇಟೆಗಳ ಮೇಲೆ ಪ್ರಭಾವ ಬೀರುತ್ತಿವೆ ಎಂದು ಕೋಟಕ್‌ ಸೆಕ್ಯುರಿಟೀಸ್‌ನ ಈಕ್ವಿಟಿ ಸಂಶೋಧನೆಯ ಮುಖ್ಯಸ್ಥ ಶ್ರೀಕಾಂತ್‌ ಚೌಹಾಣ್‌ ಹೇಳಿದ್ದಾರೆ.

ರೂಪಾಯಿ ಮೌಲ್ಯ ವೃದ್ಧಿ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 30 ಪೈಸೆ ಹೆಚ್ಚಾಗಿ ಒಂದು ಡಾಲರ್‌ಗೆ ₹ 74.70ರಂತೆ ವಿನಿಮಯಗೊಂಡಿತು. ಒಂಭತ್ತು ದಿನಗಳ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಡಾಲರ್‌ ಎದುರು ಒಟ್ಟಾರೆ 162 ಪೈಸೆಗಳಷ್ಟು ಹೆಚ್ಚಾಗಿದೆ.

ಬ್ರೆಂಟ್‌ ಕಚ್ಚಾ ತೈಲ ದರ ಶೇ 0.57ರಷ್ಟು ಹೆಚ್ಚಾಗಿದ್ದು ಒಂದು ಬ್ಯಾರಲ್‌ಗೆ 79.05 ಡಾಲರ್‌ಗಳಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.