ಮುಂಬೈ: ದೇಶದ ಷೇರುಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಗೂಳಿ ಓಟ ಜೋರಾಯಿತು. ನವೆಂಬರ್‌ನಲ್ಲಿ ಚಿಲ್ಲರೆ ಹಣದುಬ್ಬರದ ಇಳಿಕೆಯಾಗಿರುವುದು ಸೂಚ್ಯಂಕಗಳ ಏರಿಕೆಗೆ ನೆರವಾಯಿತು.
ಬೆಳಿಗ್ಗಿನ ವಹಿವಾಟಿನಲ್ಲಿ 1,207 ಅಂಶ ಇಳಿಕೆ ಕಂಡಿದ್ದ ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ ವಹಿವಾಟಿನ ಅಂತ್ಯಕ್ಕೆ ಚೇತರಿಕೆ ಕಂಡಿತು. 843 ಅಂಶ ಏರಿಕೆ ಕಂಡು 82,133 ಅಂಶಗಳಲ್ಲಿ ಸ್ಥಿರಗೊಂಡಿತು.
ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 219 ಅಂಶ ಏರಿಕೆ ಕಂಡು, 24,768 ಅಂಶಗಳಲ್ಲಿ ವಹಿವಾಟು ಮುಕ್ತಾಯಗೊಂಡಿತು.
ಸೆನ್ಸೆಕ್ಸ್ ಗುಚ್ಛದಲ್ಲಿನ ಭಾರ್ತಿ ಏರ್‌ಟೆಲ್, ಐಟಿಸಿ, ಕೋಟಕ್ ಮಹೀಂದ್ರ ಬ್ಯಾಂಕ್, ಎಚ್‌ಸಿಎಲ್, ಟೈಟನ್, ಅಲ್ಟ್ರಾಟೆಕ್ ಸಿಮೆಂಟ್, ಎಚ್‌ಸಿಎಲ್ ಟೆಕ್ನಾಲಜೀಸ್, ಪವರ್ ಗ್ರಿಡ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ಟಾಟಾ ಸ್ಟೀಲ್, ಇಂಡಸ್ ಇಂಡ್ ಬ್ಯಾಂಕ್, ಜೆಎಸ್‌ಡಬ್ಲ್ಯು ಸ್ಟೀಲ್, ಬಜಾಜ್ ಫೈನಾನ್ಸ್ ಷೇರಿನ ಮೌಲ್ಯ ಇಳಿಕೆಯಾಗಿದೆ.
ಗುರುವಾರದ ವಹಿವಾಟಿನಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ₹3,560 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಜಾಗತಿಕ ಮಟ್ಟದಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 0.54ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರೆಲ್‌ಗೆ 73.77 ಡಾಲರ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.