ADVERTISEMENT

ಸತತ ನಾಲ್ಕನೇ ದಿನವೂ ಸೂಚ್ಯಂಕ ಏರಿಕೆ

ಪಿಟಿಐ
Published 23 ಜೂನ್ 2020, 12:04 IST
Last Updated 23 ಜೂನ್ 2020, 12:04 IST
ಬಿಎಸ್‌ಇ
ಬಿಎಸ್‌ಇ   

ಮುಂಬೈ: ದೇಶದ ಷೇರುಪೇಟೆಗಳು ಸತತ ನಾಲ್ಕನೇ ವಹಿವಾಟಿನ ದಿನವೂ ಸಕಾರಾತ್ಮಕವಾಗಿ ವಹಿವಾಟು ಅಂತ್ಯಗೊಳಿಸಿವೆ.

ಭಾರತ–ಚೀನಾ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ತುಸು ಕಡಿಮೆ ಆಗಿರುವ ಬಗ್ಗೆ ವರದಿಯಾಗುತ್ತಿವೆ. ಇದು ಮಂಗಳವಾರ ಸೂಚ್ಯಂಕಗಳ ಏರಿಕೆಗೆ ಕಾರಣವಾಯಿತು.

ಮುಂಬೈ ಷೇರುಪೇಟೆ (ಬಿಎಸ್‌ಇ) ಸಂವೇದಿ ಸೂಚ್ಯಂಕ 519 ಏರಿಕೆ ಕಂಡು 35,430 ಅಂಶಗಳಲ್ಲಿ ವಾಹಿವಾಟು ಅಂತ್ಯವಾಗಿದೆ.

ADVERTISEMENT

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್ಇ) ಸೂಚ್ಯಂಕ ನಿಫ್ಟಿ 160 ಅಂಶ ಹೆಚ್ಚಾಗಿ 10,471 ಅಂಶಗಳಿಗೆ ತಲುಪಿದೆ.

ದಿನದ ವಹಿವಾಟಿನಲ್ಲಿ ಎಲ್‌ಆ್ಯಂಡ್‌ಟಿ ಕಂಪನಿ ಷೇರು ಶೇ 7ರಷ್ಟು ಗರಿಷ್ಠ ಏರಿಕೆ ಕಂಡಿತು. ಬಜಾಜ್‌ ಫೈನಾನ್ಸ್‌, ಇಂಡಸ್‌ಇಂಡ್‌ ಬ್ಯಾಂಕ್‌, ಎನ್‌ಟಿಪಿಸಿ, ಪವರ್‌ಗ್ರಿಡ್‌, ಮಹೀಂದ್ರಾ ಮತ್ತು ಆ್ಯಕ್ಸಿಸ್‌ ಬ್ಯಾಂಕ್‌ ಷೇರುಗಳೂ ಏರಿಕೆ ಕಂಡಿವೆ.

ರಿಲಯನ್ಸ್‌ ಇಂಡಸ್ಟ್ರೀಸ್‌, ಭಾರ್ತಿ ಏರ್‌ಟೆಲ್‌ ಮತ್ತು ಮಾರುತಿ ಕಂಪನಿಗಳ ಷೇರುಗಳ ಮೌಲ್ಯದಲ್ಲಿ ಇಳಿಕೆಯಾಗಿದೆ.

ಜಾಗತಿಕ ಷೇರುಪೇಟೆಗಳಲ್ಲಿ ನಡೆದ ಸಕಾರಾತ್ಮಕ ವಹಿವಾಟು ಸಹ ಹೂಡಿಕೆ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.