
ಮುಂಬೈ: ಮಾಹಿತಿ ತಂತ್ರಜ್ಞಾನ ವಲಯದ ಷೇರುಗಳು ಹಾಗೂ ಗ್ರಾಹಕ ಬಳಕೆ ಉತ್ಪನ್ನ ತಯಾರಿಕಾ ಕಂಪನಿಗಳ ಷೇರುಗಳನ್ನು ಹೂಡಿಕೆದಾರರು ಹೆಚ್ಚಿನ ಪ್ರಮಾಣದಲ್ಲಿ ಖರೀದಿ ಮಾಡಿದ್ದರಿಂದಾಗಿ, ದೇಶದ ಷೇರುಪೇಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಸೂಚ್ಯಂಗಳು ಏರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 595 ಅಂಶ ಏರಿಕೆಯಾಗಿ, 84,466ಕ್ಕೆ ವಹಿವಾಟು ಕೊನೆಗೊಂಡಿದೆ. ವಹಿವಾಟಿನ ನಡುವಿನಲ್ಲಿ ಸೂಚ್ಯಂಕವು 780 ಅಂಶದವರೆಗೆ ಜಿಗಿದಿತ್ತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 180 ಅಂಶ ಹೆಚ್ಚಳವಾಗಿ, 25,875ಕ್ಕೆ ಅಂತ್ಯಗೊಂಡಿದೆ.
‘ಅಮೆರಿಕ ಮತ್ತು ಭಾರತದ ನಡುವಿನ ವ್ಯಾಪಾರ ಒಪ್ಪಂದದ ಬಗ್ಗೆ ಹೂಡಿಕೆದಾರರಲ್ಲಿ ಆಶಾವಾದ ಹೆಚ್ಚಳವಾಗಿದೆ. ಜೊತೆಗೆ ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಇದು ಹೂಡಿಕೆದಾರರಿಗೆ ಷೇರುಗಳ ಖರೀದಿಗೆ ಉತ್ತೇಜನ ನೀಡಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ನಂದೀಶ್ ಶಾ ಹೇಳಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 0.84ರಷ್ಟು ಇಳಿಕೆ ಆಗಿದೆ. ಪ್ರತೀ ಬ್ಯಾರಲ್ 64.61 ಡಾಲರ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.