ADVERTISEMENT

ಷೇರು ಮಾರುಕಟ್ಟೆ: ಸೆನ್ಸೆಕ್ಸ್ 418 ಅಂಶ ಏರಿಕೆ

ಪಿಟಿಐ
Published 4 ಆಗಸ್ಟ್ 2025, 15:35 IST
Last Updated 4 ಆಗಸ್ಟ್ 2025, 15:35 IST
ಸೆನ್ಸೆಕ್ಸ್
ಸೆನ್ಸೆಕ್ಸ್   

ಮುಂಬೈ: ಲೋಹ, ಸರಕುಗಳು ಮತ್ತು ವಾಹನ ತಯಾರಿಕಾ ಕಂಪನಿಗಳ ಷೇರುಗಳ ಖರೀದಿ ಹೆಚ್ಚಳದಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಏರಿಕೆ ಕಂಡಿವೆ.

ಪ್ರಮುಖ ವಾಹನ ತಯಾರಿಕಾ ಕಂಪನಿಗಳ ತ್ರೈಮಾಸಿಕದ ಫಲಿತಾಂಶ ಮತ್ತು ವಾಹನಗಳ ಮಾರಾಟದ ಹೆಚ್ಚಳವು ಹೂಡಿಕೆದಾರರಿಗೆ ಉತ್ತೇಜನ ನೀಡಿದೆ. ಇದು ಸೂಚ್ಯಂಕಗಳ ಜಿಗಿತಕ್ಕೆ ಕಾರಣವಾಯಿತು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 418 ಅಂಶ ಹೆಚ್ಚಳವಾಗಿ, 81,018ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 157 ಅಂಶ ಏರಿಕೆಯಾಗಿ, 24,722ಕ್ಕೆ ಕೊನೆಗೊಂಡಿದೆ.

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶೇ 1.15ರಷ್ಟು ಇಳಿಕೆಯಾಗಿದೆ. ಪ್ರತಿ ಬ್ಯಾರೆಲ್ ದರವು 68.87 ಡಾಲರ್ ಆಗಿದೆ. ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಶುಕ್ರವಾರದ ವಹಿವಾಟಿನಲ್ಲಿ ₹3,366 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ರೂಪಾಯಿ ಮೌಲ್ಯ ಇಳಿಕೆ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯವು 48 ಪೈಸೆ ಕುಸಿದಿದೆ. ಪ್ರತೀ ಡಾಲರ್ ಎದುರು ರೂಪಾಯಿ ಬೆಲೆ ₹87.66 ಆಗಿದೆ.

ವಿದೇಶಿ ಬಂಡವಾಳದ ನಿರಂತರ ಹೊರಹರಿವು ಮತ್ತು ಅಮೆರಿಕದ ವ್ಯಾಪಾರ ಸುಂಕದ ಅನಿಶ್ಚಿತತೆಯು ಹೂಡಿಕೆದಾರರ ಮೇಲೆ ಪರಿಣಾಮ ಬೀರಿದೆ. ಇದು ರೂಪಾಯಿ ಮೌಲ್ಯ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.