ADVERTISEMENT

ಮುಂದುವರಿದ ತೇಜಿ ವಹಿವಾಟು

ಪಿಟಿಐ
Published 16 ನವೆಂಬರ್ 2022, 15:22 IST
Last Updated 16 ನವೆಂಬರ್ 2022, 15:22 IST

ಮುಂಬೈ (ಪಿಟಿಐ): ದೇಶದ ಷೇರುಪೇಟೆಗಳಲ್ಲಿ ತೇಜಿ ವಹಿವಾಟು ಮುಂದುವರಿದಿದೆ. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಬುಧವಾರ ಮತ್ತೊಂದು ದಾಖಲೆಯ ಮಟ್ಟವನ್ನು ತಲುಪಿದೆ. 107 ಅಂಶ ಏರಿಕೆ ಕಂಡ ಸೆನ್ಸೆಕ್ಸ್, ದಾಖಲೆಯ ಮಟ್ಟವಾದ 61,980 ಅಂಶಗಳಲ್ಲಿ ವಹಿವಾಟು ಕೊನೆಗೊಳಿಸಿತು.

ಬ್ಯಾಂಕಿಂಗ್ ವಲಯದ ಷೇರುಗಳನ್ನು ಹೂಡಿಕೆದಾರರು ಹೆಚ್ಚು ಖರೀದಿಸಿದ್ದು ಸೂಚ್ಯಂಕದ ಓಟಕ್ಕೆ ನೆರವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 6 ಅಂಶ ಏರಿಕೆ ಕಂಡಿತು.

‘ದೇಶಿ ಅರ್ಥ ವ್ಯವಸ್ಥೆಯ ಸ್ಥಿತಿ, ವಿದೇಶಿ ಹೂಡಿಕೆಯ ಪ್ರಮಾಣ ಪೂರಕವಾಗಿಯೇ ಇದೆಯಾದರೂ, ದೇಶದ ಈಕ್ವಿಟಿ ಮಾರುಕಟ್ಟೆಗಳ ಮೌಲ್ಯವು ಹೆಚ್ಚಾಗಿರುವ ಕಾರಣ, ಒಂದಿಷ್ಟು ಎಚ್ಚರಿಕೆಯ ವಹಿವಾಟು ನಡೆಯಬಹುದು’ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.