ADVERTISEMENT

ಷೇರುಪೇಟೆ: 587 ಅಂಶ ಕುಸಿದ ಸೆನ್ಸೆಕ್ಸ್

ಪಿಟಿಐ
Published 19 ಜುಲೈ 2021, 15:04 IST
Last Updated 19 ಜುಲೈ 2021, 15:04 IST

ಮುಂಬೈ: ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ ಸೋಮವಾರದ ವಹಿವಾಟಿನಲ್ಲಿ 586 ಅಂಶ ಕುಸಿತ ದಾಖಲಿಸಿತು. ಏಪ್ರಿಲ್‌ 30ರ ನಂತರದಲ್ಲಿ ಸೆನ್ಸೆಕ್ಸ್ ಕಂಡಿರುವ ದೊಡ್ಡ ಕುಸಿತ ಇದು.

ಜಾಗತಿಕ ಮಾರುಕಟ್ಟೆಗಳಲ್ಲಿ ಹೂಡಿಕೆದಾರರು ಷೇರುಗಳ ಮಾರಾಟಕ್ಕೆ ಹೆಚ್ಚಿನ ಗಮನ ನೀಡಿದ್ದು ಹಾಗೂ ಕೆಲವು ಕಾರ್ಪೊರೇಟ್ ಕಂಪನಿಗಳ ತ್ರೈಮಾಸಿಕ ಫಲಿತಾಂಶ ನಿರೀಕ್ಷೆಗೆ ತಕ್ಕಂತೆ ಇಲ್ಲದಿದ್ದುದು ಈ ಕುಸಿತಕ್ಕೆ ಕಾರಣ ಎಂದು ವರ್ತಕರು ತಿಳಿಸಿದ್ದಾರೆ. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 31 ಪೈಸೆ ಕುಸಿದಿದೆ.

ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 171 ಅಂಶ ಇಳಿಕೆಯಾಯಿತು. ಕೊರೊನಾ ವೈರಾಣುವಿನ ಡೆಲ್ಟಾ ರೂಪಾಂತರಿ ತಳಿಯಿಂದಾಗಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳಿಂದಾಗಿ ಜಾಗತಿಕ ಷೇರುಪೇಟೆಗಳಲ್ಲಿ ಇಳಿಮುಖ ವಹಿವಾಟು ನಡೆಯಿತು.

ADVERTISEMENT

‘ಹಣಕಾಸು ವಲಯದ ಷೇರುಗಳು ಸೋಮವಾರದ ವಹಿವಾಟಿನಲ್ಲಿ ಇಳಿಕೆ ಕಂಡವು’ ಎಂದು ರಿಲಯನ್ಸ್ ಸೆಕ್ಯುರಿಟೀಸ್‌ನ ಬಿನೋದ್ ಮೋದಿ ಹೇಳಿದ್ದಾರೆ. ಬಿಎಸ್‌ಇ ಮಿಡ್‌ ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ಕೂಡ ಇಳಿಕೆ ದಾಖಲಿಸಿದವು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಪ್ರತಿ ಬ್ಯಾರೆಲ್ಲಿಗೆ ಶೇಕಡ 2.28ರಷ್ಟು ಇಳಿಕೆ ಆಗಿ, 71.91 ಡಾಲರ್‌ಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.