ADVERTISEMENT

ಸೆನ್ಸೆಕ್ಸ್‌ 470 ಅಂಶ ಇಳಿಕೆ

ಪಿಟಿಐ
Published 18 ಜನವರಿ 2021, 16:20 IST
Last Updated 18 ಜನವರಿ 2021, 16:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಾರಾಟದ ಒತ್ತಡಕ್ಕೆ ಒಳಗಾಗಿ ದೇಶದ ಷೇರುಪೇಟೆಗಳಲ್ಲಿ ಸತತ ಎರಡನೇ ದಿನವೂ ನಕಾರಾತ್ಮಕ ವಹಿವಾಟು ನಡೆಯಿತು. ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ 470 ಅಂಶ ಇಳಿಕೆ ಕಂಡು 48,564 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 152 ಅಂಶ ಇಳಿಕೆಯಾಗಿ 14,281 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ.

ಗರಿಷ್ಠ ನಷ್ಟ: ದಿನದ ವಹಿವಾಟಿನಲ್ಲಿ ಒಎನ್‌ಜಿಸಿ ಷೇರು ಶೇ 4.59ರಷ್ಟು ಗರಿಷ್ಠ ನಷ್ಟ ಕಂಡಿತು. ಸನ್‌ ಫಾರ್ಮಾ, ಇಂಡಸ್‌ಇಂಡ್‌ ಬ್ಯಾಂಕ್‌, ಪವರ್‌ ಗ್ರಿಡ್‌, ಬಜಾಜ್‌ ಫೈನಾನ್ಸ್‌, ಬಜಾಜ್‌ ಫಿನ್‌ ಸರ್ವ್‌, ಎಸ್‌ಬಿಐ, ಎನ್‌ಟಿಪಿಸಿ ಷೇರುಗಳ ಬೆಲೆಯೂ ಇಳಿಕೆ ಆಗಿದೆ.

ADVERTISEMENT

ರಿಲಯನ್ಸ್ ಇಂಡಸ್ಟ್ರೀಸ್‌, ಟೈಟಾನ್‌, ಎಚ್‌ಡಿಎಫ್‌ಸಿ ಬ್ಯಾಂಕ್‌ ಮತ್ತು ಐಟಿಸಿ ಷೇರುಗಳು ಶೇ 2.37ರವರೆಗೆ ಏರಿಕೆ ಕಂಡಿವೆ.

ಬಿಎಸ್‌ಇ ಮಿಡ್‌ ಮತ್ತು ಸ್ಮಾಲ್‌ ಕ್ಯಾಪ್‌ ಶೇ 2.01ರವರೆಗೂ ಇಳಿಕೆ ಕಂಡಿವೆ.

ರೂಪಾಯಿ: ಡಾಲರ್‌ ಎದುರು ರೂಪಾಯಿ ಮೌಲ್ಯ 21 ಪೈಸೆ ಇಳಿಕೆ ಕಂಡು ಒಂದು ಡಾಲರ್‌ಗೆ₹ 73.28ರಂತೆ ವಿನಿಮಯಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.