ADVERTISEMENT

ಏರಿಕೆ ಕಂಡ ಸೆನ್ಸೆಕ್ಸ್, ನಿಫ್ಟಿ

​ಪ್ರಜಾವಾಣಿ ವಾರ್ತೆ
Published 27 ಜೂನ್ 2023, 17:26 IST
Last Updated 27 ಜೂನ್ 2023, 17:26 IST
   

ಮುಂಬೈ: ದೇಶದ ಷೇರುಪೇಟೆ ಸೂಚ್ಯಂಕಗಳು ಮಂಗಳವಾರದ ವಹಿವಾಟಿನಲ್ಲಿ ಏರಿಕೆ ದಾಖಲಿಸಿವೆ. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 446 ಅಂಶ ಹಾಗೂ ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 126 ಅಂಶ ಏರಿಕೆ ಕಂಡಿವೆ.

ಎಚ್‌ಡಿಎಫ್‌ಸಿ ಬ್ಯಾಂಕ್‌ ಹಾಗೂ ಎಚ್‌ಡಿಎಫ್‌ಸಿ, ಐಸಿಐಸಿಐ ಬ್ಯಾಂಕ್, ಎಕ್ಸಿಸ್ ಬ್ಯಾಂಕ್ ಷೇರುಗಳನ್ನು ಹೂಡಿಕೆದಾರರು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದರು. ಅಲ್ಲದೆ, ರಿಯಾಲ್ಟಿ, ಐ.ಟಿ. ವಲಯದ ಷೇರುಗಳ ಖರೀದಿಯೂ ಹೆಚ್ಚಿತ್ತು ಎಂದು ವರ್ತಕರು ಹೇಳಿದ್ದಾರೆ.

‘ಬ್ಯಾಂಕಿಂಗ್ ಮತ್ತು ಹಣಕಾಸು ವಲಯದ ಷೇರುಗಳ ಖರೀದಿ ಹೆಚ್ಚಿದ್ದ ಕಾರಣದಿಂದಾಗಿ ಸೂಚ್ಯಂಕಗಳು ಜಿಗಿದಿವೆ’ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 1.12ರಷ್ಟು ಕಡಿಮೆ ಆಗಿದ್ದು ಪ್ರತಿ ಬ್ಯಾರೆಲ್‌ಗೆ 73.35 ಡಾಲರ್‌ಗೆ ತಲುಪಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.