ADVERTISEMENT

61 ಸಾವಿರದಿಂದ ಕೆಳಗಿಳಿದ ಸೆನ್ಸೆಕ್ಸ್‌

ಪಿಟಿಐ
Published 4 ಜನವರಿ 2023, 20:00 IST
Last Updated 4 ಜನವರಿ 2023, 20:00 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಹೂಡಿಕೆದಾರರು ಲಾಭ ಗಳಿಕೆಯ ವಹಿವಾಟಿಗೆ ಮುಂದಾಗಿದ್ದರಿಂದ ಷೇರುಪೇಟೆಗಳಲ್ಲಿ ಬುಧವಾರ ನಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 637 ಅಂಶ ಕಡಿಮೆಯಾಗಿ 61 ಸಾವಿರಕ್ಕಿಂತ ಕೆಳಕ್ಕೆ ಇಳಿದರೆ, ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 189 ಅಂಶ ಇಳಿಕೆ ಕಂಡು 18,042 ಅಂಶಗಳಿಗೆ ತಲುಪಿತು.

ವಿದೇಶಿ ಬಂಡವಾಳ ಹೊರಹರಿವು ಸಹ ವಹಿವಾಟಿನ ಇಳಿಕೆಗೆ ಕಾರಣವಾಯಿತು ಎಂದು ವರ್ತಕರು ಹೇಳಿದ್ದಾರೆ. ಜಾಗತಿಕ ಮಾರುಕಟ್ಟೆಯ ಪರಿಣಾಮಕ್ಕೆ ಒಳಗಾಗಿ ದೇಶಿ ಷೇರುಪೇಟೆಗಳು ಇಳಿಕೆ ಕಾಣುವಂತಾಯಿತು. ಅಮೆರಿಕದ ಫೆಡರಲ್‌ ರಿಸರ್ವ್‌ನ ಸಭೆಯ ಸಾರಾಂಶವು ಬಿಡುಗಡೆ ಆಗಲಿದ್ದು, ಬಡ್ಡಿದರ ಇನ್ನಷ್ಟು ಹೆಚ್ಚಳವಾಗುವ ಆತಂಕದಿಂದ ಸೂಚ್ಯಂಕಗಳು ಇಳಿಕೆ ಕಂಡವು ಎಂದು ಜಿಯೋಜಿತ್ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್‌ ನಾಯರ್ ಹೇಳಿದ್ದಾರೆ.

ADVERTISEMENT

ದೇಶಿ ಮಾರುಕಟ್ಟೆಯು ಕಾರ್ಪೊರೇಟ್‌ ಗಳಿಕೆಯ ಮೇಲೆ ಹೆಚ್ಚು ಗಮನ ಹರಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಬ್ರೆಂಟ್ ಕಚ್ಚಾ ತೈಲ ದರ ಶೇ 1.86ರಷ್ಟು ಇಳಿಕೆ ಕಂಡು ಒಂದು ಬ್ಯಾರಲ್‌ಗೆ 80.57 ಡಾಲರ್‌ಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.